ETV Bharat / bharat

ಹಿಮಾಚಲ ಪ್ರದೇಶ AAP ಮುಖ್ಯಸ್ಥ ಬಿಜೆಪಿ ಸೇರ್ಪಡೆ..! - ಅರವಿಂದ್​ ಕೇಜ್ರಿವಾಲ್ ವಿರುದ್ಧ ಅನುಪ್ ಕೇಸರಿ ವಾಗ್ದಾಳಿ

ಹಿಮಾಚಲ ಪ್ರದೇಶದಲ್ಲಿ ಈ ವರ್ಷ ಡಿಸೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬೆನ್ನಲ್ಲೇ ಹಿಮಾಚಲ ಪ್ರದೇಶದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅನುಪ್ ಕೇಸರಿ ಮತ್ತು ಮತ್ತಿಬ್ಬರು ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

himachal aam aadmi party president anup kesari join bjp
ಹಿಮಾಚಲ ಪ್ರದೇಶ ಆಪ್ ಪಕ್ಷದ ಮುಖ್ಯಸ್ಥ ಬಿಜೆಪಿ ಸೇರ್ಪಡೆ
author img

By

Published : Apr 9, 2022, 12:21 PM IST

ನವದೆಹಲಿ : ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಹಿಮಾಚಲ ಪ್ರದೇಶದ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅನುಪ್ ಕೇಸರಿ ಮತ್ತು ಮತ್ತಿಬ್ಬರು ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದರಿಂದಾಗಿ ಹಿಮಾಚಲ ಪ್ರದೇಶದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆ ಉಂಟಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ. ಅನುಪ್ ಕೇಸರಿ ಅವರ ಜೊತೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸತೀಶ್ ಠಾಕೂರ್ ಮತ್ತು ಉನಾ ಜಿಲ್ಲಾ ಮುಖ್ಯಸ್ಥ ಇಕ್ಬಾಲ್ ಸಿಂಗ್ ಅವರು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ಸೇರ್ಪಡೆ ಕುರಿತಂತೆ ಮಾತನಾಡಿರುವ ಅನುಪ್ ಕೇಸರಿ ನಾವು ಹಿಮಾಚಲ ಪ್ರದೇಶದಲ್ಲಿ ಕಳೆದ ಎಂಟು ವರ್ಷಗಳಿಂದ ಆಮ್ ಆದ್ಮಿ ಪಕ್ಷಕ್ಕಾಗಿ ಅತ್ಯಂತ ಪ್ರಾಮಾಣಿಕತೆ ಮತ್ತು ಸಮರ್ಪಣಾ ಭಾವದಿಂದ ಹಗಲಿರುಳು ಕೆಲಸ ಮಾಡುತ್ತಿದ್ದೇವೆ. ಆದರೆ, ಅರವಿಂದ್ ಕೇಜ್ರಿವಾಲ್ ಅವರು ಮಂಡಿಯಲ್ಲಿ ರೋಡ್‌ಶೋಗೆ ಬಂದಾಗ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಕಡೆಗಣನೆಯನ್ನು ಹಿಮಾಚಲ ಪ್ರದೇಶದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಅವಮಾನವೆಂದು ಪರಿಗಣಿಸಿದ್ದಾರೆ. ಆದರೆ ಎಲ್ಲಾ ಕಾರ್ಯಕರ್ತರು ತಮ್ಮ ಸ್ವಾಭಿಮಾನಕ್ಕಾಗಿ ಪಕ್ಷವನ್ನು ತೊರೆದಿದ್ದಾರೆ ಎಂದು ಅನುಪ್ ಕೇಸರಿ ಹೇಳಿದ್ದಾರೆ.

  • अरविंद केजरीवाल, पहाड़ और पहाड़ी आपके झाँसे में नहीं आयेंगे।

    आम आदमी पार्टी की हिमाचल विरोधी नीतियों के विरुद्ध आप पार्टी के हिमाचल प्रदेश अध्यक्ष श्री अनूप केसरी जी,संगठन महामंत्री श्री सतीश ठाकुर जी व ऊना के अध्यक्ष श्री इक़बाल सिंह जी ने दुनिया की सबसे बड़ी राजनैतिक पार्टी.. pic.twitter.com/7ENQxi9Jfb

    — Anurag Thakur (@ianuragthakur) April 8, 2022 " class="align-text-top noRightClick twitterSection" data=" ">

ನಾವು ಅರವಿಂದ್​ ಕೇಜ್ರಿವಾಲ್ ಅವರ ನಡೆಯ ಬಗ್ಗೆ ತುಂಬಾ ನಿರಾಶೆಗೊಂಡಿದ್ದೇವೆ. ಪಕ್ಷಕ್ಕಾಗಿ ಹಗಲಿರುಳು ದುಡಿಯುವ ನಮ್ಮ ಕಡೆಗೆ ಅವರು ಗಮನ ಹರಿಸಲೇ ಇಲ್ಲ ಎಂದು ಅನುಪ್ ಕೇಸರಿ ಹೇಳಿದ್ದಾರೆ. ಇದರ ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಹೆಚ್ಚು ಶ್ರಮಿಸುವುದಾಗಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಪಕ್ಷದ ರಾಷ್ಟ್ರೀಯ ಮುಖ್ಯಸ್ಥ ಜೆ ಪಿ ನಡ್ಡಾ ಅವರಿಗೆ ಅನುಪ್ ಕೇಸರಿ ಭರವಸೆ ನೀಡಿದರು.

ಪಂಜಾಬ್‌ನಲ್ಲಿ ಭರ್ಜರಿ ಗೆಲುವಿನ ನಂತರ ಎಎಪಿ ಈಗ ಹಿಮಾಚಲ ಪ್ರದೇಶದ ಮೇಲೆ ಕಣ್ಣಿಟ್ಟಿದೆ. ಹಿಮಾಚಲ ಪ್ರದೇಶದಲ್ಲಿ ಈ ವರ್ಷ ಡಿಸೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಎಲ್ಲಾ 68 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಯುಪಿ ಸಿಎಂ ಕಚೇರಿಯ ಟ್ವಿಟರ್​ ಮಧ್ಯರಾತ್ರಿ ಹ್ಯಾಕ್: ಡಿಪಿ ಬದಲಾವಣೆ, 50ಕ್ಕೂ ಹೆಚ್ಚು ಟ್ವೀಟ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.