ಯಾದಾದ್ರಿ ಭುವನಗಿರಿ (ತೆಲಂಗಾಣ): ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದತ್ತಾತ್ರೇಯ ಅವರು ತೆಲಂಗಾಣದ ಸೂರ್ಯಪೇಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದು ಪೊದೆಗೆ ನುಗ್ಗಿದೆ. ಅದೃಷ್ಟವಶಾತ್ ದೊಡ್ಡದೊಂದು ದುರಂತ ತಪ್ಪಿದ್ದು, ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.
ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು : ಓರ್ವ ಸ್ಥಳದಲ್ಲೇ ಸಾವು
ಘಟನೆ ನಡೆದ ಸ್ವಲ್ಪ ಸಮಯದ ನಂತರ ರಾಜ್ಯಪಾಲರು ಸೂರ್ಯಪೇಟೆಗೆ ಮತ್ತೊಂದು ವಾಹನದಲ್ಲಿ ತೆರಳಿದರು.