ETV Bharat / bharat

'ಕೈ' ಬಿಟ್ಟ ಮತ್ತೋರ್ವ ನಾಯಕ... ಗುಜರಾತ್ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಕಾರ್ಯದರ್ಶಿ ರಾಜೀನಾಮೆ

author img

By

Published : Nov 5, 2022, 1:27 PM IST

ಸಾಗರೋತ್ತರ ಕಾಂಗ್ರೆಸ್ ಉಸ್ತುವಾರಿ ಹಿಮಾನ್ಶು ವ್ಯಾಸ್​ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸೇರಿದಂತೆ ಇತರ ಹುದ್ದೆಗಳಿಗೂ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

himanshu vyas resigned
ಹಿಮಾನ್ಶು ವ್ಯಾಸ್​ ರಾಜಿನಾಮೆ

ಗುಜರಾತ್​: ಗುಜರಾತ್​ ವಿಧಾನಸಭಾ ಚುನಾವಣೆ ಕಣ ರಂಗೇರುತ್ತಿದ್ದು, ಈ ಬಾರಿ ಕಾಂಗ್ರೆಸ್​ ಹಾಗೂ ಬಿಜೆಪಿ ಜೊತೆ ಆಮ್​ ಆದ್ಮಿ ಪಾರ್ಟಿ ಕೂಡ ಗುಜರಾತ್​ನ ಚುನಾವಣಾ ಅಖಾಡಕ್ಕೆ ಇಳಿದಿದೆ. ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಕಾಂಗ್ರೆಸ್​ 43 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್​ ಪಾಳಯದಲ್ಲಿ ಮಹತ್ವದ ಬದಲಾವಣೆಯೊಂದು ಸಂಭವಿಸಿದೆ.

ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಹಿಮಾನ್ಶು ವ್ಯಾಸ್ ಅವರು ತಮ್ಮ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದಷ್ಟೇ ಅಲ್ಲದೆ ಅವರು ತಮ್ಮ ಸಾಗರೋತ್ತರ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದಾರೆ. ಕಾಂಗ್ರೆಸ್​ಗೆ ರಾಜೀನಾಮೆ ಸಲ್ಲಿದ ನಂತರ ಶೀಘ್ರದಲ್ಲೇ ಅವರು ಬಿಜೆಪಿ ಪಕ್ಷವನ್ನು ಸೇರಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜೀನಾಮೆ ಪತ್ರ ಸಲ್ಲಿರುವ ಹಿಮಾನ್ಶು ವ್ಯಾಸ್​ ಅವರು, ಕಾಂಗ್ರೆಸ್​ನಲ್ಲಿ ನಮ್ಮ ಮಾತಿಗೆ ಬೆಲೆಯಿಲ್ಲ. ರಾಹುಲ್​ ಗಾಂಧಿ ಅವರನ್ನು ಭೇಟಿ ಆಗುವುದು ಕೂಡ ಕಷ್ಟವಾಗಿದೆ. ದೆಹಲಿಯಲ್ಲೂ ಭೇಟಿ ಮಾಡುವುದು ಸಾಧ್ಯವಾಗುತ್ತಿರಲಿಲ್ಲ. ಗುಜರಾತ್​ನಲ್ಲಿ ಬಿಜೆಪಿ ವಿಜಯ ಸಾಧಿಸುತ್ತಿದೆ. ಬಿಜೆಪಿಯೇ ಮತ್ತೆ ಸರ್ಕಾರ ರಚಿಸಲಿದೆ. ಅಲ್ಲದೆ ಈ ಬಾರಿ ಗುಜರಾತ್​ ಅಖಾಡದಲ್ಲಿ ಆಮ್​ ಆದ್ಮಿ ಪಾರ್ಟಿ ಕೂಡ ಸ್ಪರ್ಧಿಸುತ್ತಿರುವುದರಿಂದ ಕಾಂಗ್ರೆಸ್​ಗೆ ನಷ್ಟವಾಗಿದೆ. ನಾಯಕತ್ವ ಹಾಗೂ ಸಂಘಟನೆಯಲ್ಲಿ ಸಂವಹನದ ಕೊರತೆಯಿದೆ. ಪ್ರಾಣ ಕೊಟ್ಟು ಪಕ್ಷಕ್ಕಾಗಿ ದುಡಿಯುವವರ ಬಗ್ಗೆ ಪಕ್ಷದಲ್ಲಿ ಗೌರವ ಕಡಿಮೆಯಾಗಿದೆ ಎಂದು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಬಗ್ಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ವಿದೇಶದಲ್ಲಿ ಭಾರತದ ಪ್ರಬಲ ಸ್ಥಾನವನ್ನು ಹೆಚ್ಚಿಸಿದ್ದಾರೆ. ಎಎಪಿ ಪಕ್ಷ ಕೂಡ ನನ್ನೊಂದಿಗೆ ಮಾತನಾಡಿ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದೆ. ಆದರೆ ನನಗೆ ಅವರ ಬಗ್ಗೆ ಆಸಕ್ತಿ ಇರಲಿಲ್ಲ ಎಂದು ಹೇಳಿದರು.

ಹಿಮಾನ್ಶು ವ್ಯಾಸ್ ಸುರೇಂದ್ರನಗರದ ವಡ್ವಾನ್ ಕ್ಷೇತ್ರದಿಂದ ಈ ಹಿಂದೆ ಎರಡು ಬಾರಿ ಸ್ಪರ್ಧಿಸಿದ್ದರು. ಆದರೆ ಎರಡೂ ಬಾರಿ ಕೂಡ ಬಿಜೆಪಿ ಅಭ್ಯರ್ಥಿ ಮುಂದೆ ಸೋತಿದ್ದರು. ಗುಜರಾತ್​ ವಿಧಾನಸಭಾ ಚುನಾವಣೆಗೆ ಎರಡು ಹಂತಗಳಲ್ಲಿ ಡಿ. 1 ಮತ್ತು 5 ರಂದು ಮತದಾನ ನಡೆಯಲಿದೆ. ಡಿ. 8ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶಕ್ಕೆ ಚುನಾವಣಾ ದಿನಾಂಕ ಘೋಷಣೆ: ಗುಜರಾತ್​ ಚುನಾವಣೆ ವಿಳಂಬ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.