ETV Bharat / bharat

ಅಸ್ಸೋಂ ನೂತನ ಸಿಎಂ ಆಗಿ ಹಿಮಂತ ಬಿಸ್ವಾ ಆಯ್ಕೆ.. ನಾಳೆ ಪ್ರಮಾಣವಚನ - Himanta Biswa Sarma selected as next CM of Assam

ಅಸ್ಸೋಂನ ನೂತನ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾರನ್ನು ಆಯ್ಕೆ ಮಾಡಲಾಗಿದ್ದು, ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಹೊರಬಿದ್ದಿದೆ.

Himanta Biswa Sarma selected as next CM of Assam
ಹಿಮಂತ ಬಿಸ್ವಾ ಶರ್ಮಾ
author img

By

Published : May 9, 2021, 12:59 PM IST

Updated : May 9, 2021, 1:18 PM IST

ಗುವಾಹಟಿ: ಅಸ್ಸೋಂನ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ರಾಜ್ಯದಲ್ಲಿ ಕೇಸರಿ ಪಡೆಯ ಪ್ರಮುಖ ನಾಯಕ ಹಿಮಂತ ಬಿಸ್ವಾ ಶರ್ಮಾ ಅವರೇ ಸಿಎಂ ಎಂದು ಘೋಷಿಸಲಾಗಿದೆ.

ಅಸ್ಸೋಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮಹತ್ವದ ಗೆಲುವು ದಾಖಲಿಸಿತ್ತಾದರೂ ಎಲೆಕ್ಷನ್​ಗೂ ಮುಂಚೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಹೀಗಾಗಿ ಫಲಿತಾಂಶ ಬಂದು ವಾರ ಕಳೆದರೂ ಅಧಿಕಾರದ ಚುಕ್ಕಾಣಿ ಹಿಡಿಯುವ ವ್ಯಕ್ತಿ ಯಾರೆಂಬುದೇ ಕುತೂಹಲವಾಗಿ ಉಳಿದಿತ್ತು. ಅಸ್ಸೋಂ ಹಾಲಿ ಸಿಎಂ ಸರ್ಬಾನಂದ ಸೊನೊವಾಲ್ ಹಾಗೂ ಆರೋಗ್ಯ, ವಿತ್ತ ಮತ್ತು ಶಿಕ್ಷಣ ಸಚಿವರಾಗಿದ್ದ ಹಿಮಂತ ಬಿಸ್ವಾ ಶರ್ಮಾ- ಈ ಇಬ್ಬರೂ ನೂತನ ಮುಖ್ಯಮಂತ್ರಿ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದರು.

ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ಹೆಸರನ್ನು ಅಂತಿಮಗೊಳಿಸಲಾಗಿದೆ. ನಾಳೆ ಶರ್ಮಾ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Last Updated : May 9, 2021, 1:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.