ETV Bharat / bharat

ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ಹಿಂದೂ ಕಾಲೇಜಿನ ಪ್ರಾಧ್ಯಾಪಕ ಅರೆಸ್ಟ್​​, ವಿದ್ಯಾರ್ಥಿಗಳ ಪ್ರೊಟೆಸ್ಟ್​ - ಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜು

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಶಿವಲಿಂಗದ ಪ್ರಕರಣವು ಸೂಕ್ಷ್ಮವಾಗಿದ್ದು, ನ್ಯಾಯಾಲಯದ ಮುಂದಿದೆ. ಈ ನಡುವೆಯೇ ರತನ್​ ಲಾಲ್​ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನೀಡಿರುವ ಹೇಳಿಕೆ ಪ್ರಚೋದನಕಾರಿಯಾಗಿದೆ ಎಂದು ವಕೀಲರು ದೂರಿದ್ದರು.

Hindu College associate professor arrest
ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕ ರತನ್ ಲಾಲ್ ಬಂಧನ
author img

By

Published : May 21, 2022, 1:06 PM IST

ನವದೆಹಲಿ: ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ಶಿವಲಿಂಗದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ನೀಡಿದ ದೂರಿನ ಮೇರೆಗೆ ಮಂಗಳವಾರ ರಾತ್ರಿ ಲಾಲ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಶಿವಲಿಂಗದ ಬಗ್ಗೆ ಪ್ರಾಧ್ಯಾಪಕ ರತನ್ ಲಾಲ್ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಟ್ವೀಟ್ ಹಂಚಿಕೊಂಡಿದ್ದಾರೆ. ಈ ಪ್ರಕರಣವು ಸೂಕ್ಷ್ಮವಾಗಿದ್ದು, ನ್ಯಾಯಾಲಯದ ಮುಂದಿದೆ. ಈ ನಡುವೆಯೇ ಇವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನೀಡಿರುವ ಹೇಳಿಕೆ ಪ್ರಚೋದನಕಾರಿಯಾಗಿದೆ ಎಂದು ವಕೀಲರು ದೂರಿದ್ದರು.

ಅಂತೆಯೇ ಐಪಿಸಿ ಸೆಕ್ಷನ್​​ 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ಗುಂಪು ದ್ವೇಷಕ್ಕೆ ಪ್ರಯೋಜನೆ ಮತ್ತು ಸೌಹಾರ್ದತೆ ಮೇಲೆ ದುಷ್ಪರಿಣಾಮ ಬೀರುವ ಕೃತ್ಯಗಳು) ಮತ್ತು 295ಎ (ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಸೈಬರ್​ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಲಾಲ್ ಅವರನ್ನು ಬಂಧಿಸಿದ್ದಾರೆ.

ಈ ಹಿಂದೆ ತಮ್ಮ ಪೋಸ್ಟ್​ನ್ನು ಸಮರ್ಥಿಸಿಕೊಂಡಿದ್ದ ಲಾಲ್, ಭಾರತದಲ್ಲಿ ನೀವು ಯಾರ ಬಗ್ಗೆ ಮಾತನಾಡಿದರೂ, ಯಾರಿಗಾದರೂ ಅಥವಾ ಇನ್ನೊಬ್ಬರ ಭಾವನೆಗೆ ಧಕ್ಕೆಯಾಗುತ್ತದೆ. ಹಾಗಾಗಿ ಇದು ಹೊಸದೇನಲ್ಲ. ನಾನು ಇತಿಹಾಸಕಾರ. ಹಲವಾರು ಅವಲೋಕನಗಳನ್ನು ಮಾಡಿದ್ದೇನೆ. ಇತಿಹಾಸದ ಬಗ್ಗೆ ನಾನು ಬರೆದಿದ್ದೇನೆ. ನಾನು ನನ್ನ ಪೋಸ್ಟ್‌ನಲ್ಲಿ ಬಹಳ ಹಿಡಿತವಾದ ಭಾಷೆಯನ್ನು ಬಳಸಿದ್ದೇನೆ ಮತ್ತು ಈಗಲೂ ಇದನ್ನೇ ಬಳಸಿದ್ದೇನೆ. ನಾನು ನನ್ನನ್ನು ಕಾಪಾಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದರು.

ವಿದ್ಯಾರ್ಥಿಗಳ ಪ್ರತಿಭಟನೆ: ಪ್ರಾಧ್ಯಾಪಕ ರತನ್ ಲಾಲ್ ಬಂಧನ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳು ಶುಕ್ರವಾರ ರಾತ್ರಿಯೇ ಪ್ರತಿಭಟನೆ ನಡೆಸಿದ್ದಾರೆ. ಸೈಬರ್​ ಪೊಲೀಸ್​ ಠಾಣೆ ಮುಂದೆ ಭಾರತೀಯ ವಿದ್ಯಾರ್ಥಿಗಳ ಒಕ್ಕೂಟ (ಎಸ್​​ಎಫ್​ಐ) ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (ಎಐಎಸ್‌ಎ) ನೇತೃತ್ವದಲ್ಲಿ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೇದಾರನಾಥ ದೇವಸ್ಥಾನದೊಳಗೆ ಶ್ವಾನ ಕರೆದೊಯ್ದು ನಂದಿ ವಿಗ್ರಹಕ್ಕೆ ಕಾಲು ಸ್ಪರ್ಶಿಸಿದ ವ್ಯಕ್ತಿ ವಿರುದ್ಧ ಕೇಸ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.