ETV Bharat / bharat

ಹಿಂದೂ ಧರ್ಮ-ಹಿಂದುತ್ವ ಇವೆರಡೂ ಬೇರೆ ಬೇರೆ : ರಾಹುಲ್​ ಗಾಂಧಿ - Rahul Gandhi reaction about Hindutva

ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ( Rashtriya Swayamsevak Sangh )ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) (Bharatiya Janata Party) ದ್ವೇಷದ ಸಿದ್ಧಾಂತವು ನಮಗೆ ಇಷ್ಟವಾಗಲಿ ಅಥವಾ ಇಲ್ಲದಿರಲಿ. ಆದರೆ, ಕಾಂಗ್ರೆಸ್ ಪಕ್ಷದ ಪ್ರೀತಿ, ವಾತ್ಸಲ್ಯ ಮತ್ತು ರಾಷ್ಟ್ರೀಯತೆಯ ಸಿದ್ಧಾಂತವನ್ನು ನಾವು ಒಪ್ಪಿಕೊಳ್ಳಬೇಕು..

ರಾಹುಲ್​ ಗಾಂಧಿ
ರಾಹುಲ್​ ಗಾಂಧಿ
author img

By

Published : Nov 12, 2021, 4:20 PM IST

Updated : Nov 12, 2021, 4:35 PM IST

ನವದೆಹಲಿ : ಹಿಂದೂ ಧರ್ಮ ಮತ್ತು ಹಿಂದುತ್ವ ಎರಡು ಬೇರೆ ಬೇರೆ ವಿಷಯಗಳು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress leader Rahul Gandhi) ಶುಕ್ರವಾರ ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾಂಗ್ರೆಸ್ ಪಕ್ಷದ ಡಿಜಿಟಲ್ ಅಭಿಯಾನವಾದ 'ಜನ್ ಜಾಗರಣ ಅಭಿಯಾನ'ದ (digital campaign 'Jan Jagran Abhiyan') ಉದ್ಘಾಟನೆ ಮಾಡಿ ಮಾತನಾಡಿದ ಅವರು, "ಹಿಂದೂ ಧರ್ಮ ಮತ್ತು ಹಿಂದುತ್ವದ ನಡುವಿನ ವ್ಯತ್ಯಾಸವೇನು?, ಅವು ಒಂದೇ ಆಗಿರಬಹುದೇ? ಒಂದೇ ಆಗಿದ್ದರೆ, ಏಕೆ ಒಂದೇ ಹೆಸರಿಲ್ಲ? ಅವು ನಿಸ್ಸಂಶಯವಾಗಿ ವಿಭಿನ್ನ ವಿಷಯಗಳಾಗಿವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಸಿದ್ಧಾಂತ ಜೀವಂತವಾಗಿದೆ, ಹಾಗೆ ರೋಮಾಂಚಕವಾಗಿದೆ. ಆದರೆ, ಅದನ್ನು ಮರೆ ಮಾಡಲಾಗಿದೆ. ಇಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ( Rashtriya Swayamsevak Sangh )ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) (Bharatiya Janata Party) ದ್ವೇಷದ ಸಿದ್ಧಾಂತವು ನಮಗೆ ಇಷ್ಟವಾಗಲಿ ಅಥವಾ ಇಲ್ಲದಿರಲಿ. ಆದರೆ, ಕಾಂಗ್ರೆಸ್ ಪಕ್ಷದ ಪ್ರೀತಿ, ವಾತ್ಸಲ್ಯ ಮತ್ತು ರಾಷ್ಟ್ರೀಯತೆಯ ಸಿದ್ಧಾಂತವನ್ನು ನಾವು ಒಪ್ಪಿಕೊಳ್ಳಬೇಕು. ಆದರೆ, ಅದು ಮಬ್ಬಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಪಕ್ಷವು ಜನರಲ್ಲಿ ಸಿದ್ಧಾಂತವನ್ನು ಆಕ್ರಮಣಕಾರಿಯಾಗಿ ಪ್ರಚಾರ ಮಾಡದ ಕಾರಣ ಪಕ್ಷದ ಸಿದ್ಧಾಂತವು ಮಬ್ಬಾಗಿದೆ ಎಂದು ವಿವರಿಸಿದರು.

ಕೇಂದ್ರದ ಬಡವರ ವಿರೋಧಿ ನೀತಿಗಳನ್ನು ಎತ್ತಿ ಹಿಡಿಯಲು, ಈ ಬಗ್ಗೆ ಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷವು ನವೆಂಬರ್ 14ರಿಂದ ನವೆಂಬರ್ 29ರ ನಡುವೆ ಜನ ಜಾಗರಣ ಅಭಿಯಾನ ಎಂಬ ಹೆಸರಿನಲ್ಲಿ ರಾಷ್ಟ್ರವ್ಯಾಪಿ ಜನಜಾಗೃತಿ ಕಾರ್ಯಕ್ರಮವನ್ನು ನಡೆಸಲಿದೆ.

Last Updated : Nov 12, 2021, 4:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.