ಅಹಮದಾಬಾದ್ : ನಗರದಲ್ಲಿ ಹಿಟ್ ಅಂಡ್ ರನ್ ಕೇಸ್ ಬೆಳಕಿಗೆ ಬಂದಿದೆ. ಶಿವರಂಜನಿ ಬಳಿ ಫುಟ್ಪಾತ್ ಮೇಲೆ ಮಲಗಿದ್ದ ನಾಲ್ವರ ಮೇಲೆ ಚಾಲಕ ಕಾರು ಹತ್ತಿಸಿದ್ದಾನೆ. ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದೆ.
ಸ್ಥಳಕ್ಕಾಗಮಿಸಿದ ಪೊಲೀಸರು, ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಪಘಾತದ ಬಳಿಕ ಕಾರು ಮಾಲೀಕ ಶೈಲೇಶ್ ಶಾ ಇಡೀ ಕುಟುಂಬ ಊರು ಬಿಟ್ಟು ಪರಾರಿಯಾಗಿದೆ. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಹಿಟ್ ಅಂಡ್ ರನ್ ಕೇಸ್ನಲ್ಲಿ ಎ ಡಿವಿಷನ್ ಟ್ರಾಫಿಕ್ ಪೊಲೀಸರು ಕಾರು ಚಾಲಕನ ವಿರುದ್ಧ ಸೆಕ್ಷನ್ 304-ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.