ETV Bharat / bharat

ರಸ್ತೆ ಬದಿಗಳಲ್ಲಿ ಕೆಲಸ ಮಾಡುವ ಮಕ್ಕಳ ಕಲ್ಯಾಣಕ್ಕಾಗಿ ಮತ್ತೊಮ್ಮೆ ಸಭೆ ಮಾಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ - ರಾಜ್ಯ ಸರ್ಕಾರ ಪರಿಣಾಮಕಾರಿ ಕೆಲಸ ಮಾಡಬೇಕು

ರಸ್ತೆ, ಬೀದಿ ಬದಿಗಳಲ್ಲಿ ಕೆಲಸ ಮಾಡುವ ಮಕ್ಕಳ ರಕ್ಷಣೆ ಮತ್ತು ಶಿಕ್ಷಣ, ಪುನರ್ವಸತಿ ನೀಡುವಂತೆ ಸಭೆ ನಡೆಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ, ಜಾಗೃತಿ ಮೂಡಿಸುವುದಕ್ಕಾಗಿ ಈಗಾಗಲೇ ಮೆಟ್ರೋ ರೈಲಿನಲ್ಲಿ 1098 ಸಹಾಯವಾಣಿ ಸಂಖ್ಯೆಯುಳ್ಳ ಸ್ಕ್ರೋಲಿಂಗ್ ಪೋಸ್ಟರ್‌ ಅಳವಡಿಸಲಾಗಿದೆ.

old-a-meeting-for-the-welfare-of-children-working-on-roadsides-high-court-notice
Karnataka high court notice
author img

By

Published : Nov 3, 2022, 4:36 PM IST

ಬೆಂಗಳೂರು: ನಗರದ ರಸ್ತೆ ಬದಿಗಳಲ್ಲಿ ಮತ್ತು ಸಿಗ್ನಲ್‌ಗಳಲ್ಲಿ ಪೆನ್ ಸೇರಿದಂತೆ ಇತರ ವಸ್ತುಗಳನ್ನು ಮಾರಾಟ ಮಾಡುವ ಮಕ್ಕಳಿಗೆ ಪುರ್ನವಸತಿ ಕಲ್ಪಿಸುವುದು ಮತ್ತು ಶಿಕ್ಷಣ ನೀಡುವುದಕ್ಕಾಗಿ ಅಗತ್ಯ ಸಲಹೆಗಳನ್ನು ನೀಡಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ(ಕೆಎಸ್‌ಎಲ್‌ಎಸ್‌ಎ) ಸದಸ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಮಕ್ಕಳ ರಕ್ಷಣೆಗೆ ಶ್ರಮಿಸುತ್ತಿರುವ ಸಂಸ್ಥೆಗಳ ಪಾಲುದಾರರು ನ.15ರಂದು ಸಭೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದೆ.

ವಿಚಾರಣೆ ಮುಂದೂಡಿದ ಕೋರ್ಟ್​: ಬೆಂಗಳೂರು ನಗರದ ಲೆಟ್ಜ್ಕಿಟ್ ಫೌಂಡೇಷನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಲೆ ಅವರಿದ್ದ ವಿಭಾಗೀಯ ಪೀಠ, ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. 2021ರ ಫೆ.18ರಂದು ನ್ಯಾಯಪೀಠದ ಸೂಚನೆ ಮೇರೆಗೆ ಎಲ್ಲ ಪಾಲುದಾರರು ಸಭೆ ನಡೆಸಿ ಸಲಹೆಗಳನ್ನು ನೀಡಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಸರ್ಕಾರ ಅನುಪಾಲನಾ ವರದಿ ಸಲ್ಲಿಸಿದೆ.

ಈ ವರದಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಬೇಕಾಗಿದೆ. ಆದ್ದರಿಂದ ಮತ್ತೊಮ್ಮೆ ಸಭೆ ನಡೆಸಬೇಕು. ಈ ನಿಟ್ಟಿನಲ್ಲಿ ನ. 15ರ ಸಂಜೆ 5.30ಕ್ಕೆ ಸಭೆ ನಡೆಸುವಂತೆ ಕೋರ್ಟ್ ಸೂಚನೆ ನೀಡಿದೆ. ಈ ಹಿಂದೆ ಭಾಗಿಯಾಗಿದ್ದ ಎಲ್ಲ ಪಾಲುದಾರರು ಸಭೆಗೆ ತಪ್ಪದೆ ಹಾಜರಾಗಬೇಕು. ರಾಜ್ಯ ಸರ್ಕಾರ ಅನುಪಾಲನಾ ವರದಿಗೆ ಸಂಬಂಧಿಸಿದಂತೆ ಎಲ್ಲಾ ವರದಿಗಳ ಹೆಚ್ಚಿನ ಪ್ರತಿಗಳನ್ನು ಒದಗಿಸಬೇಕು. ಪಾಲುದಾರರಿಗೆ ಅನುಪಾಲನಾ ವರದಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಬೇಕು ಎಂದು ನ್ಯಾಯಪೀಠ ಸೂಚನೆ ನೀಡಿತು.

ಹೈಕೋರ್ಟ್​ ಸಭಾಂಗಣದಲ್ಲಿ ಸಭೆಗೆ ವ್ಯವಸ್ಥೆ: ಇದಕ್ಕಾಗಿ ರಿಜಿಸ್ಟ್ರಾರ್ ಅವರು ಹೈಕೋರ್ಟ್ ಸಭಾಂಗಣದಲ್ಲಿ ಸಭೆ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಇದರೊಂದಿಗೆ ಮಕ್ಕಳ ರಕ್ಷಣೆ ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ಈಗಾಗಲೇ ಮೆಟ್ರೋ ರೈಲಿನಲ್ಲಿ 1098 ಸಹಾಯವಾಣಿ ಸಂಖ್ಯೆಯುಳ್ಳ ಸ್ಕ್ರೋಲಿಂಗ್ ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ.

ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಮಾಹಿತಿ ಫಲಕಗಳನ್ನು ಅಳವಡಿಸಲು ಚೈಲ್ಡ್ ಲೈನ್ ಸಂಸ್ಥೆಯ ಅಧ್ಯಕ್ಷರು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಎಲ್ಲಾ ಸಾರಿಗೆ ನಿಗಮಗಳ ಅಧ್ಯಕ್ಷರಿಗೆ ಮನವಿಯನ್ನು ಮಾಡಲಾಗಿದೆ. ಆಟೋ ರಿಕ್ಷಾಗಳ ಹಿಂದೆ ಪ್ರದರ್ಶನವನ್ನು ಮಾಡಲಾಗುತ್ತಿದೆ ಎಂದು ಸರ್ಕಾರಕ್ಕೆ ಪ್ರಮಾಣ ಪತ್ರ ಸಲ್ಲಿಸಿದೆ.

ರಾಜ್ಯ ಸರ್ಕಾರ ಪರಿಣಾಮಕಾರಿ ಕೆಲಸ ಮಾಡಬೇಕು: ಅದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ, ಈ ಪ್ರಕ್ರಿಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಬೇಕಾಗಿದೆ. ಅದೇ ರೀತಿ ಫಲಕಗಳನ್ನು ಸಾರ್ವಜನಿಕ ವಾಹನಗಳು, ಆಟೋ ರಿಕ್ಷಾಗಳು ಹಾಗೂ ಜನ ಹೆಚ್ಚು ಭೇಟಿ ನೀಡುವ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶನ ಮಾಡಿದರೆ ಉದ್ದೇಶವನ್ನು ಈಡೇರಿಸಲು ನೆರವಾಗಲಿದೆ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿತು.

ಜಾಗೃತಿ ಮೂಡಿಸುವ ಡಿಜಿಟಲ್ ಸ್ಕ್ರೋಲ್‌ಗಳನ್ನು ಪ್ರಾದೇಶಿಕ ವಾಹಿನಿಗಳಾದ ದೂರದರ್ಶನ, ಖಾಸಗಿ ವಾಹಿನಿಗಳು, ಕೇಬಲ್ ಚಾನೆಲ್‌ಗಳಲ್ಲಿ ಕಾಲ ಕಾಲಕ್ಕೆ ಪ್ರದರ್ಶನ ಮಾಡುವುದಕ್ಕೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಬೇಕು. ಇದನ್ನು ಅನುಷ್ಟಾನ ಮಾಡುವುದನ್ನು ಗಮನಿಸುತ್ತಿರಬೇಕು ಎಂದು ಸೂಚನೆ ನೀಡಿ ಹೈಕೋರ್ಟ್ ವಿಚಾರಣೆ ಮುಂದೂಡಿದೆ.

ಇದನ್ನು ಓದಿ:ಲಾಕ್ಹೀಡ್ ಮಾರ್ಟಿನ್ ಕಂಪನಿ ವಿಸ್ತರಣೆಗೆ ಸರ್ಕಾರದ ಸಹಕಾರ: ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.