ETV Bharat / bharat

ಗೃಹ ಸಚಿವ ಅಮಿತ್ ಶಾ ಕೇರಳ ಭೇಟಿ ಇಂದು: ತ್ರಿಶೂರ್‌ನಲ್ಲಿ ಸಾರ್ವಜನಿಕ ಸಭೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮಧ್ಯಾಹ್ನ ಕೇರಳಕ್ಕೆ ಆಗಮಿಸಲಿದ್ದಾರೆ. ಕೇರಳದ ತ್ರಿಶೂರ್​ನಲ್ಲಿ ಅವರು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.

author img

By

Published : Mar 12, 2023, 1:06 PM IST

ಕೇಂದ್ರ ಗೃಹ ಸಚಿವ ಅಮಿತ್ ಶಾ
Union Home Minister Amit Shah

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಮಾರ್ಚ್ 12 ರಂದು) ಕೇರಳದ ತ್ರಿಶೂರ್‌ಗೆ ಭೇಟಿ ನೀಡಲಿದ್ದಾರೆ. ಸಚಿವ ಅಮಿತ್ ಶಾ ಮಧ್ಯಾಹ್ನ 2 ಗಂಟೆಗೆ ತ್ರಿಶೂರ್ ತಲುಪಲಿದ್ದಾರೆ. ಮೊದಲಿಗೆ ಅವರು ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದು ಹೆಲಿಕಾಪ್ಟರ್ ಮೂಲಕ ತ್ರಿಶೂರ್‌ಗೆ ಪ್ರಯಾಣಿಸುತ್ತಾರೆ ಎಂದು ಗೃಹ ಸಚಿವರ ಕಚೇರಿಯ ಹೇಳಿಕೆ ತಿಳಿಸಿದೆ. ಬಿಜೆಪಿ ನಾಯಕರು ಅಮಿತ್ ಶಾ ಅವರನ್ನು ಶೋಭಾ ನಗರದ ಹೆಲಿಪ್ಯಾಡ್‌ನಲ್ಲಿ ಬರಮಾಡಿಕೊಳ್ಳಲಿದ್ದಾರೆ. ಇದರ ನಂತರ ಶಾ ಅವರು ಸಕ್ತನ್ ತಂಪುರಾನ್ ಸ್ಮಾರಕದಲ್ಲಿ ಪುಷ್ಪನಮನ ಸಲ್ಲಿಸಲಿದ್ದಾರೆ.

ತ್ರಿಶೂರ್‌ನ ದಕ್ಷಿಣ ಗೋಪುರ ನಾಡಾದಲ್ಲಿ ಸಂಜೆ 4 ಗಂಟೆಗೆ ಶಾ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಕೇರಳ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2024 ರ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯು ಕೇರಳದಲ್ಲಿ ಛಾಪು ಮೂಡಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ರಾಜ್ಯವಾದ ಕೇರಳಕ್ಕೆ ಶಾ ಭೇಟಿ ನೀಡುವುದು ಬಹಳ ಮಹತ್ವದ್ದಾಗಿದೆ.

ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಾರ್ಚ್ 12 ರಂದು) ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಸುಮಾರು 16,000 ಕೋಟಿ ರೂಪಾಯಿಗಳ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. ಮಧ್ಯಾಹ್ನ ಪ್ರಧಾನ ಮಂತ್ರಿಗಳು ಮಂಡ್ಯದಲ್ಲಿ ಪ್ರಮುಖ ರಸ್ತೆ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 3.15ಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹೈದರಾಬಾದ್​ನಲ್ಲಿ ಗೃಹಸಚಿವ ಅಮಿತ್​ ಶಾ: ದೇಶದಲ್ಲಿ ಭಯೋತ್ಪಾದನೆ ಮತ್ತು ನಕ್ಸಲಿಸಂನಲ್ಲಿ ತೊಡಗುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಮತ್ತು ಅವರಲ್ಲಿ ಅನೇಕರು ಮುಖ್ಯವಾಹಿನಿಗೆ ಸೇರುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ. ಭಯೋತ್ಪಾದನೆ ಮತ್ತು ನಕ್ಸಲಿಸಂ ವಿರುದ್ಧ ತಮ್ಮ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿ ಹೊಂದಿದೆ ಎಂದು ಅವರು ಹೇಳಿದರು. ಹೈದರಾಬಾದ್‌ನ ನ್ಯಾಷನಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಅಕಾಡೆಮಿ (ಎನ್‌ಐಎಸ್‌ಎ)ಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) 54ನೇ ರೈಸಿಂಗ್ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವ ಅಮಿತ್ ಶಾ ಮಾತನಾಡಿದರು.

ಸುರಕ್ಷಿತ ವಿಮಾನ ನಿಲ್ದಾಣ ಮತ್ತು ಸಮುದ್ರ ಬಂದರುಗಳಿಲ್ಲದೆ ಯಾವುದೇ ದೇಶವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಭಾರತವನ್ನು 5 ಟ್ರಿಲಿಯನ್ ಆರ್ಥಿಕತೆಯನ್ನಾಗಿ ಮಾಡಲು ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಹಿನ್ನೆಲೆಯಲ್ಲಿ, ಈ ಉದ್ದೇಶವನ್ನು ಸಾಕಾರಗೊಳಿಸುವಲ್ಲಿ ಸಿಐಎಸ್ಎಫ್ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವರು ಹೇಳಿದರು. ನವದೆಹಲಿಯ ಹೊರಗೆ ಮೊದಲ ಬಾರಿಗೆ ನಡೆದ ಈ ರೈಸಿಂಗ್ ಡೇ ಕಾರ್ಯಕ್ರಮದಲ್ಲಿ, ದೇಶದ ಪ್ರಮುಖ ನೆಲೆಗಳ ಮೇಲೆ ನಕ್ಸಲ್ ದಾಳಿ ನಡೆದಾಗ ಅದನ್ನು ಸಿಐಎಸ್‌ಎಫ್ ಯೋಧರು ಹೇಗೆ ಯಶಸ್ವಿಯಾಗಿ ಎದುರಿಸುತ್ತಾರೆ ಎಂಬುದನ್ನು ತೋರಿಸುವ ಅಣಕು ಪ್ರದರ್ಶನ ನೆರೆದಿದ್ದ ಎಲ್ಲರನ್ನೂ ಬೆರಗುಗೊಳಿಸಿತು.

ಇದನ್ನೂ ಓದಿ : ಮೋದಿ- ಶಾ ದಕ್ಷಿಣ ಭಾರತ ದಂಡಯಾತ್ರೆ: ಚುನಾವಣೆಗೂ ಮೊದಲು ಪಕ್ಷ ಸಂಘಟನೆ ಗುರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.