ETV Bharat / bharat

ಜಮ್ಮು ಕಾಶ್ಮೀರದಲ್ಲಿ ಹೆಚ್ಚುತ್ತಿದೆ ಉದ್ದೇಶಿತ ಹತ್ಯೆ: ಶಾ-ದೋವಲ್​ ನಿರಂತರ ಸಭೆ - ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ನಾಗರಿಕರ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ

ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ನಾಗರಿಕರ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವಾಲಯದಲ್ಲಿ ಎರಡು ಪ್ರತ್ಯೇಕ ಉನ್ನತ ಮಟ್ಟದ ಸಭೆಗಳು ನಡೆದಿವೆ.

Home Ministry holds back-to-back meetings over J&K targeted killings

author img

By

Published : Jun 2, 2022, 8:42 PM IST

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ನಾಗರಿಕರ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಪರಿಸ್ಥಿತಿ ಪರಿಶೀಲಿಸಲು ಕೇಂದ್ರ ಗೃಹ ಸಚಿವಾಲಯದಲ್ಲಿ ಎರಡು ಪ್ರತ್ಯೇಕ ಉನ್ನತ ಮಟ್ಟದ ಸಭೆಗಳು ನಡೆದಿವೆ. ಮೊದಲ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಮತ್ತು ಆರ್ ಎ ಡಬ್ಲ್ಯೂ ಮುಖ್ಯಸ್ಥ ಸಮಂತ್ ಗೋಯೆಲ್ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಅಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಸಭೆಯಲ್ಲಿ ಶಾ ಅವರು ದೋವಲ್ ಮತ್ತು ಗೋಯೆಲ್ ಅವರನ್ನು ಜೆ & ಕೆ ನಲ್ಲಿ ಶಾಂತಿ ನೆಲೆಸುವಂತೆ ಮಾಡುವ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಎರಡನೇ ಸಭೆಯಲ್ಲಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಭಯೋತ್ಪಾದಕರಿಂದ ನಡೆಯುತ್ತಿರುವ ಉದ್ದೇಶಿತ ನಾಗರಿಕರ ಹತ್ಯೆ ಬಗ್ಗೆ ಚರ್ಚಿಸಲಾಯಿತು. ಈ ಸಭೆಯಲ್ಲಿ ಡಿಜಿ ಬಿಎಸ್‌ಎಫ್ ಪಂಕಜ್ ಸಿಂಗ್, ಸಿಆರ್‌ಪಿಎಫ್ ಮತ್ತು ಎನ್‌ಐಎ ಡಿಜಿ ಸಿಂಗ್ ಕುಲ್ದೀಪ್ ಸಿಂಗ್, ಕೇಂದ್ರ ಗೃಹ ಸಚಿವಾಲಯದ ಇತರ ಅಧಿಕಾರಿಗಳು ಮತ್ತು ಜೆ & ಕೆ ಯ ಗುಪ್ತಚರ ಸಂಸ್ಥೆಗಳು ಭಾಗವಹಿಸಿದ್ದವು.

ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಡೈರೆಕ್ಟರ್ ಜನರಲ್ ದಿಲ್ಬಾಗ್ ಸಿಂಗ್, ಎನ್ಎಸ್ಎ ಅಜಿತ್ ದೋವಲ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಜೆ & ಕೆ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಭದ್ರತಾ ಸಭೆಯ ಅಧ್ಯಕ್ಷತೆ ವಹಿಸುವ ಒಂದು ದಿನದ ಮೊದಲು ಈ ಸಭೆ ನಡೆದಿದೆ.

ಅಲ್ಲಿನ ನಾಗರಿಕರ ಹತ್ಯೆಯ ಬಗ್ಗೆ ಗೃಹ ಸಚಿವಾಲಯವು ಕಳವಳ ವ್ಯಕ್ತಪಡಿಸಿದೆ ಮತ್ತು ಅದಕ್ಕಾಗಿಯೇ ಸಭೆಯು ಮುಖ್ಯವಾಗಿ ಜೆ & ಕೆ ನ ಪ್ರಸ್ತುತ ಪರಿಸ್ಥಿತಿ ಚರ್ಚಿಸುತ್ತದೆ ಎಂದು ಗೃಹ ಸಚಿವಾಲಯದ ವಕ್ತಾರರು ಮಾಹಿತಿ ನೀಡಿದ್ದಾರೆ. ಇದಕ್ಕೂ ಮೊದಲು ಮೇ 17 ರಂದು ಗೃಹ ಸಚಿವ ಶಾ ಅವರು ಜೆ & ಕೆ ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಇದೇ ರೀತಿಯ ಭದ್ರತಾ ಪರಿಶೀಲನಾ ಸಭೆಯನ್ನು ನಡೆಸಿದ್ದರು.

ಇದನ್ನೂ ಓದಿ: ಬಳ್ಳಾರಿ: ಅಪ್ರಾಪ್ತೆ ಪ್ರೀತಿಸಿ ದುರಂತ ಅಂತ್ಯ ಕಂಡ ಯುವಕ.. ಸಾವಿಗೆ ಹುಡುಗಿ ಮನೆಯವರೇ ಕಾರಣವಾದರಾ?

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.