ETV Bharat / bharat

ಮಥುರಾದಲ್ಲಿ ಮರ್ಯಾದೆ ಹತ್ಯೆ: ಒಬ್ಬಳೇ ಮಗಳನ್ನು ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿದ ತಂದೆ - ಮರ್ಯಾದೆಗೆ ಅಂಜಿ ಗುಂಡಿಕ್ಕಿ ಕೊಂದು

ತಮ್ಮ ಒಬ್ಬಳೇ ಮಗಳನ್ನು ಮರ್ಯಾದೆಗೆ ಅಂಜಿ ಗುಂಡಿಕ್ಕಿ ಕೊಂದು, ಸ್ವತಃ ತಾವೇ ತನ್ನ ಕಾರಿನಲ್ಲಿ ಮೃತದೇಹವನ್ನು ತಂದು ಎಸೆದಿರುವುದಾಗಿ ತಂದೆ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Honor killing in Mathura
ಮಥುರಾದಲ್ಲಿ ಮರ್ಯಾದ ಹತ್ಯೆ
author img

By

Published : Nov 21, 2022, 11:24 AM IST

Updated : Nov 21, 2022, 11:33 AM IST

ಮಥುರಾ(ಉತ್ತರ ಪ್ರದೇಶ): ಯಮುನಾ ಎಕ್ಸ್​ಪ್ರೆಸ್ ವೇ ಸರ್ವೀಸ್ ರಸ್ತೆಯಲ್ಲಿರುವ ಕೃಷಿ ಸಂಶೋಧನಾ ಕೇಂದ್ರದ ಬಳಿ ಶುಕ್ರವಾರ ಕೆಂಪು ಬಣ್ಣದ ಟ್ರಾಲಿ ಸೂಟ್‌ಕೇಸ್‌ನಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಈ ಮೃತದೇಹ ದೆಹಲಿಯ ಮೋಡ್‌ಬಂದ್ ಎಂಬ ಪ್ರದೇಶದ ನಿವಾಸಿ ನಿತೇಶ್ ಯಾದವ್ ಅವರ ಪುತ್ರಿ ಆಯುಷಿ ಯಾದವ್ (21) ಅವರದ್ದಾಗಿದ್ದು, ತಂದೆಯೇ ಮರ್ಯಾದೆಗೆ ಅಂಜಿ ಗುಂಡಿಕ್ಕಿ ಕೊಂದಿರುವುದು ವಿಚಾರಣೆ ವೇಳೆ ಬಯಲಾಗಿದೆ.

ತಮ್ಮ ಒಬ್ಬಳೇ ಮಗಳನ್ನು ಮರ್ಯಾದೆಗೆ ಹೆದರಿ ಗುಂಡಿಕ್ಕಿ ಕೊಂದಿರುವುದಾಗಿ ಆರೋಪಿ ತಂದೆ ಒಪ್ಪಿಕೊಂಡಿದ್ದಾನೆ. ನ.17 ರಂದು ಮಧ್ಯಾಹ್ನ ಕೊಲೆ ನಡೆದಿದ್ದು, ಮೃತದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ತನ್ನದೇ ಕಾರಿನಲ್ಲಿ ತಂದು ಯಮುನಾ ಎಕ್ಸ್​ಪ್ರೆಸ್​ ವೇ ಸರ್ವಿಸ್​ ರಸ್ತೆಯಲ್ಲಿ ಎಸೆದು ಹೋಗಿದ್ದಾನೆ. ಮಗಳು ತನಗೆ ಹೇಳದೆ ಎಲ್ಲೋ ಹೋಗಿದ್ದಳು, ಮನೆಗೆ ಬಂದ ತಕ್ಷಣ ಹೊಡೆದು ಕೋಪದಲ್ಲಿ ಗುಂಡು ಹಾರಿಸಿದ್ದಾಗಿ ಆತ ಪೊಲೀಸರಿಗೆ ತಿಳಿಸಿದ್ದಾನೆ.

ಮರಣೋತ್ತರ ಪರೀಕ್ಷೆಯ ನಂತರ ಭಾನುವಾರ ತಡರಾತ್ರಿ ತಾಯಿ ಹಾಗೂ ಸಹೋದರ ಮೃತದೇಹವನ್ನು ಗುರುತಿಸಿದ್ದಾರೆ. ನಂತರ ಪೊಲೀಸರು ಸಂಶಯ ಬಂದು ತಂದೆಯನ್ನು ವಿಚಾರಣೆಗೊಳಪಡಿಸಿದಾಗ ನಿಜ ಸಂಗತಿ ಗೊತ್ತಾಗಿದೆ. ಯುವತಿಯ ದೇಹದ ಹಲವೆಡೆ ಗಾಯಗಳಾಗಿದ್ದು, ಎದೆಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ನೀಡಿದ್ದಾರೆ.

ಇದನ್ನೂ ಓದಿ: ಶ್ರದ್ಧಾ ವಾಲ್ಕರ್​​ ಹತ್ಯೆ ಪ್ರಕರಣ: ಸಿನಿಮಾ ನಿರ್ಮಾಣ ಘೋಷಿಸಿದ ನಿರ್ದೇಶಕ ಮನೀಶ್​ ಸಿಂಗ್​

Last Updated : Nov 21, 2022, 11:33 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.