ETV Bharat / bharat

ನೋಯ್ಡಾ ಹೌಸಿಂಗ್​ ಸೊಸೈಟಿ​​​ ಕಟ್ಟಡದ ಗೋಡೆ ಕುಸಿತ: ನಾಲ್ವರು ಸಾವು, 9 ಮಂದಿಗೆ ಗಾಯ

author img

By

Published : Sep 20, 2022, 11:57 AM IST

Updated : Sep 20, 2022, 12:16 PM IST

ನೋಯ್ಡಾ ಸೆಕ್ಟರ್​​-21ರಲ್ಲಿರುವ ಹೌಸಿಂಗ್​ ಸೊಸೈಟಿ ಕಟ್ಟಡದ ಗೋಡೆ ಕುಸಿದ ಪರಿಣಾಮ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.

wall collapses in Noida
wall collapses in Noida

ನೋಯ್ಡಾ(ಉತ್ತರ ಪ್ರದೇಶ): ಉತ್ತರ ಪ್ರದೇಶದ ನೋಯ್ಡಾದಲ್ಲಿ ನಿರ್ಮಾಣಗೊಂಡಿದ್ದ ಹೌಸಿಂಗ್ ಸೊಸೈಟಿವೊಂದರ ಕಟ್ಟಡದ ಗೋಡೆ ಕುಸಿದ ಪರಿಣಾಮ ನಾಲ್ವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇಂದು ಬೆಳಗ್ಗೆ ದುರ್ಘಟನೆ ನಡೆದಿದ್ದು, ಕೆಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಎಲ್ಲರನ್ನೂ ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನೋಯ್ಡಾ ಜಿಲ್ಲಾಧಿಕಾರಿ ಸುಹಾಸ್​​​ ಎಲ್​​ವೈ ಮಾತನಾಡಿ, ನೋಯ್ಡಾ ಸೆಕ್ಟರ್​​-21ರಲ್ಲಿ ಜಲ ವಾಯು ವಿಹಾರ್​ ಬಳಿ ಒಳಚರಂಡಿ ದುರಸ್ತಿ ಕಾಮಗಾರಿಗೋಸ್ಕರ ನೋಯ್ಡಾ ಪ್ರಾಧಿಕಾರ ಗುತ್ತಿಗೆ ನೀಡಿತ್ತು. ಕಾರ್ಮಿಕರು ಇಟ್ಟಿಗೆ ಹೊರತೆಗೆಯುತ್ತಿದ್ದ ವೇಳೆ ದಿಢೀರ್​ ಆಗಿ ಗೋಡೆ ಕುಸಿದಿದೆ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ಘಟನೆಯಲ್ಲಿ ಗಾಯಗೊಂಡಿರುವ ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಿದ್ದಾರೆ.

Last Updated : Sep 20, 2022, 12:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.