ETV Bharat / bharat

ಹುಬ್ಬಳ್ಳಿ ಭೀಕರ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಕಚೇರಿ - ಹುಬ್ಬಳ್ಳಿ ಅಪಘಾತಕ್ಕೆ ಪರಿಹಾರ ಘೋಷಣೆ

ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣದಲ್ಲಿ 8 ಮಂದಿ ಸಾವನ್ನಪ್ಪಿದ್ದು, ಮೃತ ಕುಟುಂಬಗಳಿಗೆ ಪ್ರಧಾನಮಂತ್ರಿ ಕಚೇರಿ ಪರಿಹಾರ ಘೋಷಣೆ ಮಾಡಿದೆ.

Hubli road accident
Hubli road accident
author img

By

Published : May 24, 2022, 7:00 PM IST

ನವದೆಹಲಿ: ಹುಬ್ಬಳ್ಳಿಯಲ್ಲಿ ಇಂದು ನಸುಕಿನ ಜಾವ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣದಲ್ಲಿ 8 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಿ ಕಚೇರಿ ಪರಿಹಾರ ಘೋಷಣೆ ಮಾಡಿದೆ. ಇದರ ಜೊತೆಗೆ ಮೋದಿ ಸಂತಾಪ ಸೂಚಿಸಿರುವುದಾಗಿ ಪಿಎಂಒ ಕಚೇರಿ ಟ್ವೀಟ್ ಮಾಡಿದೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಘಟನೆಯಲ್ಲಿ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

  • An ex-gratia of Rs. 2 lakh each from PMNRF would be given to the next of kin of those who lost their lives due to the mishap in Hubli. The injured would be given Rs. 50,000: PM @narendramodi

    — PMO India (@PMOIndia) May 24, 2022 " class="align-text-top noRightClick twitterSection" data=" ">

ಕರ್ನಾಟಕದ ಹುಬ್ಬಳ್ಳಿಯಲ್ಲಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಹಲವರು ಸಾವಿಗೀಡಾಗಿರುವುದು ಅತ್ಯಂತ ನೋವಿನ ವಿಚಾರ. ಅವರ ಕುಟುಂಬದ ನೋವಿನಲ್ಲಿ ನಾನು ಭಾಗಿಯಾಗಲಿದ್ದೇನೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಪಿಎಂಒ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಖಾಸಗಿ ಬಸ್-ಲಾರಿ ಮಧ್ಯೆ ಭೀಕರ ಅಪಘಾತ: 8 ಮಂದಿ ದುರ್ಮರಣ

ಹುಬ್ಬಳ್ಳಿ ತಾರಿಹಾಳ ಬಳಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 8 ಜನರು ಮೃತಪಟ್ಟಿದ್ದರು. ಜೊತೆಗೆ ದುರ್ಘಟನೆಯಲ್ಲಿ 26 ಜನರು ಗಾಯಗೊಂಡು ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತರನ್ನು ಇಚಲಕರಂಜಿ ನಿವಾಸಿ ಬಾಬಾಸೋ ಚೌಗಲೆ (59), ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸಿ ನಾಗರಾಜ ಆಚಾರ್(56), ಬೆಂಗಳೂರಿನ ನಿವಾಸಿ ಬಸ್ ಚಾಲಕ ಅತಾವುಲ್ಲಾ ಖಾನ್(40), ಮಸ್ತಾನ್, ಮೈಸೂರು ನಿವಾಸಿ ಮಹಮ್ಮದ್ ದಯಾನ್‌ ಬೇಗ್(17), ಕೊಲ್ಹಾಪುರದ ನಿವಾಸಿಗಳಾದ ಅಕ್ಷಯ ದವರ್(28), ಅಕೀಫ್(40) ಹಾಗೂ ಅಫಾಕ್( 41) ಎಂದು ಗುರುತಿಸಲಾಗಿದೆ.

ನ್ಯಾಷನಲ್ ಟ್ರಾವೆಲ್ಸ್​ನ KA 51 AA 7146 ನಂಬರ್ ಬಸ್ ಹಾಗೂ MH 16 AY 6916 ಲಾರಿ ಮಧ್ಯೆ ಅಪಘಾತ‌ ಉಂಟಾಗಿದೆ. ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಈ ಬಸ್‌ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್‌ ಒಡೆತನದ ನ್ಯಾಷನಲ್ ಟ್ರಾವೆಲ್ಸ್‌ಗೆ ಸೇರಿದೆ. ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋಗಿ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.