ETV Bharat / bharat

ಅಮೃತಸರದ ಸಿಮ್ರಂಜಿತ್ ಸಿಂಗ್ ಮಾನ್ ಸಂಗ್ರೂರ್​​ ವಿಜಯಿ: ಪಂಜಾಬ್ ಉಪಚುನಾವಣೆಯಲ್ಲಿ ಎಎಪಿಗೆ ಭಾರಿ ಹಿನ್ನಡೆ

author img

By

Published : Jun 26, 2022, 4:26 PM IST

ಸಂಸತ್ತಿನಲ್ಲಿ ನನ್ನನ್ನು ನಿಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಕ್ಕಾಗಿ ಸಂಗ್ರೂರಿನ ನಮ್ಮ ಮತದಾರರಿಗೆ ನಾನು ಆಭಾರಿಯಾಗಿದ್ದೇನೆ. ನಮ್ಮ ರೈತರು, ಕೃಷಿ ಕಾರ್ಮಿಕರು, ವ್ಯಾಪಾರಿಗಳು ಮತ್ತು ನನ್ನ ಕ್ಷೇತ್ರದ ಪ್ರತಿಯೊಬ್ಬರ ಸಂಕಷ್ಟಗಳನ್ನು ನಿವಾರಿಸಲು ನಾನು ಶ್ರಮಿಸುತ್ತೇನೆ ಎಂದು ಸಿಮ್ರಂಜಿತ್ ಸಿಂಗ್ ಮಾನ್ ಹೇಳಿದ್ದಾರೆ.

ಪಂಜಾಬ್ ಉಪಚುನಾವಣೆಯಲ್ಲಿ ಎಎಪಿಗೆ ಭಾರಿ ಹಿನ್ನಡೆ: ಅಮೃತಸರದ ಸಿಮ್ರಂಜಿತ್ ಸಿಂಗ್ ಮಾನ್ ಸಂಗ್ರೂರ್​​ ವಿಜಯಿ

ಸಂಗ್ರೂರ್ (ಪಂಜಾಬ್) : ಪಂಜಾಬ್‌ನಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಶಿರೋಮಣಿ ಅಕಾಲಿದಳ (ಅಮೃತಸರ) ನಾಯಕ ಸಿಮ್ರಂಜಿತ್ ಸಿಂಗ್ ಮಾನ್ ಇಂದು ಸಿಎಂ ತವರು ಕ್ಷೇತ್ರವಾದ ಸಂಗ್ರೂರ್ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಇದು ನಮ್ಮ ಪಕ್ಷಕ್ಕೆ ದೊಡ್ಡ ಗೆಲುವು. ಈ ಉಪಚುನಾವಣೆಯಲ್ಲಿ ನಾವು ಎಲ್ಲಾ ರಾಷ್ಟ್ರೀಯ ಪಕ್ಷಗಳನ್ನು ಸೋಲಿಸಿದ್ದೇವೆ. ಸಾಲದಲ್ಲಿರುವ ರೈತರ ಸ್ಥಿತಿ ಸೇರಿದಂತೆ ಸಂಗ್ರೂರಿನ ಕಳಪೆ ಆರ್ಥಿಕ ಸ್ಥಿತಿಯ ವಿಷಯವನ್ನು ಪ್ರಸ್ತಾಪಿಸುವುದು ನನ್ನ ಆದ್ಯತೆಯಾಗಿದೆ. ನಾವು ಪಂಜಾಬ್ ಸರ್ಕಾರದೊಂದಿಗೆ ಕೆಲಸ ಮಾಡುತ್ತೇವೆ ಎಂದು ಸಿಮ್ರಂಜಿತ್ ಸಿಂಗ್ ಮಾನ್ ಹೇಳಿದರು.

ಸಂಸತ್ತಿನಲ್ಲಿ ನನ್ನನ್ನು ನಿಮ್ಮ ಪ್ರತಿನಿಧಿಯಾಗಿ ಆಯ್ಕೆ ಮಾಡಿದ್ದಕ್ಕಾಗಿ ಸಂಗ್ರೂರಿನ ನಮ್ಮ ಮತದಾರರಿಗೆ ನಾನು ಆಭಾರಿಯಾಗಿದ್ದೇನೆ. ನಮ್ಮ ರೈತರು, ಕೃಷಿ ಕಾರ್ಮಿಕರು, ವ್ಯಾಪಾರಿಗಳು ಮತ್ತು ನನ್ನ ಕ್ಷೇತ್ರದ ಪ್ರತಿಯೊಬ್ಬರ ಸಂಕಷ್ಟಗಳನ್ನು ನಿವಾರಿಸಲು ನಾನು ಶ್ರಮಿಸುತ್ತೇನೆ ಎಂದು ಇದೇ ವೇಳೆ ತಿಳಿಸಿದರು.

ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು ಮಾನ್ ಅವರನ್ನು ಅಭಿನಂದಿಸುತ್ತ, ಸಂಗ್ರೂರ್ ಸಂಸದೀಯ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆದ್ದಿದ್ದಕ್ಕಾಗಿ ಅವರಿಗೆ ಶುಭಾಶಯ. ಅವರಿಗೆ ಎಲ್ಲಾ ರೀತಿಯ ಎಲ್ಲಾ ಸಹಕಾರವನ್ನು ನೀಡುತ್ತೇನೆ. ನಾವು ಜನಾದೇಶಕ್ಕೆ ತಲೆಬಾಗುತ್ತೇವೆ ಎಂದಿದ್ದಾರೆ.

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಕೂಡ ಮಾನ್ ಅವರನ್ನು ಅಭಿನಂದಿಸಿದ್ದಾರೆ.

ಎಎಪಿ ಸರ್ಕಾರದ ದೆಹಲಿ ಮಾದರಿಯನ್ನು ಪಂಜಾಬ್ ತಿರಸ್ಕರಿಸಿದೆ ಎಂಬುದನ್ನು ಸಂಗ್ರೂರ್ ಉಪಚುನಾವಣೆ ಫಲಿತಾಂಶ ಸೂಚಿಸುತ್ತದೆ ಎಂದು ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಹೇಳಿದ್ದಾರೆ.

ಸಂಗ್ರೂರ್ ಎಎಪಿಯ ಉಸ್ತುವಾರಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಭದ್ರಕೋಟೆ ಎಂದು ಕರೆಯಲ್ಪಡುತ್ತದೆ. ಅಲ್ಲಿಂದಲೇ ಅವರು 2014 ಮತ್ತು 2019 ರಲ್ಲಿ ಸಂಸದೀಯ ಸ್ಥಾನವನ್ನು ಗೆದ್ದಿದ್ದರು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಧುರಿ ಕ್ಷೇತ್ರದಿಂದ ಗೆದ್ದ ನಂತರ ಮಾನ್ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆ ಈ ಸ್ಥಾನವು ತೆರವಾಗಿತ್ತು.

ಸಂಗ್ರೂರ್ ಅಲ್ಲದೆ, ಉತ್ತರ ಪ್ರದೇಶದ ಇತರ ಎರಡು ಲೋಕಸಭಾ ಕ್ಷೇತ್ರಗಳಾದ ರಾಂಪುರ ಮತ್ತು ಅಜಂಗಢ್ ಉಪಚುನಾವಣೆಗಳ ಮತ ಎಣಿಕೆ ಭಾನುವಾರ ನಡೆಯಿತು. ಇದಲ್ಲದೆ, ತ್ರಿಪುರಾ, ಜಾರ್ಖಂಡ್, ಆಂಧ್ರಪ್ರದೇಶ ಮತ್ತು ದೆಹಲಿಯ ಏಳು ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಮತ ಎಣಿಕೆ ಕೂಡ ಜರುಗಿದೆ. ಜೂನ್ 23 ರಂದು ಉಪಚುನಾವಣೆ ನಡೆದಿತ್ತು.

ಇದನ್ನೂ ಓದಿ: 'ಮಹಾ' ಗದ್ದುಗೆ ಗುದ್ದಾಟ: 15 ಬಂಡಾಯ ಶಿವಸೇನೆ ಶಾಸಕರಿಗೆ ಕೇಂದ್ರದಿಂದ 'Y+' ಭದ್ರತೆ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.