ETV Bharat / bharat

ಖಲಿಸ್ತಾನಿಗಳ ಉದ್ಧಟತನಕ್ಕೆ ದಿಟ್ಟ ಪ್ರತಿಕ್ರಿಯೆ! ಹೈಕಮಿಷನ್ ಕಟ್ಟಡದಲ್ಲಿ ಮತ್ತೆ ಹಾರಾಡಿದ ಬೃಹತ್​ 'ತಿರಂಗಾ'

ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಟ್ಟಡದಲ್ಲಿ ಈಗ ಬೃಹತ್ ತ್ರಿವರ್ಣ ಧ್ವಜ ಹಾರಾಡುತ್ತಿದೆ.

Huge Tricolour adorns Indian High Commission building
ಭಾರತೀಯ ಹೈಕಮಿಷನ್ ಕಟ್ಟಡದಲ್ಲಿ ತ್ರಿವರ್ಣ ಧ್ವಜ
author img

By

Published : Mar 20, 2023, 12:45 PM IST

Updated : Mar 20, 2023, 12:51 PM IST

ಹೈದರಾಬಾದ್: ಲಂಡನ್‌ನ ಭಾರತೀಯ ಹೈಕಮಿಷನ್‌ ಕಚೇರಿಯಲ್ಲಿನ ತ್ರಿವರ್ಣ ಧ್ವಜ ಕೆಳಗಿಳಿಸಿದ ಖಲಿಸ್ತಾನಿ ಪರ ಪ್ರತಿಭಟನಾಕಾರರಿಗೆ ಭಾರತ ದಿಟ್ಟ ಪ್ರತಿಕ್ರಿಯೆ ನೀಡಿದೆ. ತ್ರಿವರ್ಣ ಧ್ವಜ ಇಳಿಸಿದ ಬೆನ್ನಲ್ಲೇ ಹೈಕಮಿಷನ್‌ ಕಟ್ಟಡದ ಮೇಲೆ ಬೃಹತ್‌ ತ್ರಿವರ್ಣ ಧ್ವಜ ಅನಾವರಣಗೊಂಡಿದೆ. ಲಂಡನ್‌ನ ಆಲ್ಡ್‌ವಿಚ್‌ನಲ್ಲಿರುವ ಇಂಡಿಯಾ ಹೌಸ್‌ ಮೇಲೆ ಭಾರತದ ಬೃಹತ್‌ ತ್ರಿವರ್ಣ ಧ್ವಜವನ್ನು ಹಾಕಲಾಗಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಳಕೆದಾರರು ಭಾರತದ ಹೈಕಮಿಷನ್‌ ಅಧಿಕಾರಿಗಳ ನಡೆಯನ್ನು ಶ್ಲಾಘಿಸಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ವಕ್ತಾರ ಜೈವೀರ್ ಶೆರ್ಗಿಲ್ ಅವರು ಫೋಟೋವನ್ನು ಟ್ವಿಟರ್​​ನಲ್ಲಿ ಹಂಚಿಕೊಂಡು, "ಝಂಡಾ ಊಂಚಾ ರಹೇ ಹಮಾರಾ" ಎಂದು ಬರೆದುಕೊಂಡಿದ್ದಾರೆ. ಅದಲ್ಲದೇ, ಲಂಡನ್‌ನಲ್ಲಿನ ಭಾರತೀಯ ಹೈಕಮಿಷನ್‌ನಲ್ಲಿನ ತ್ರಿವರ್ಣ ಧ್ವಜಕ್ಕೆ ಅವಮಾನಿಸಲು ಯತ್ನಿಸಿದ ದುಷ್ಕರ್ಮಿಗಳ ವಿರುದ್ಧ ಬ್ರಿಟನ್‌ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ರಾಷ್ಟ್ರ ಸೇವೆ ಹಾಗೂ ರಾಷ್ಟ್ರ ಸಂರಕ್ಷಣೆಯಲ್ಲಿ ಪಂಜಾಬ್‌ ಮತ್ತು ಪಂಜಾಬಿಗಳು ಅದ್ಭುತ ದಾಖಲೆ ಹೊಂದಿದ್ದಾರೆ. ಬ್ರಿಟನ್‌ನಲ್ಲಿ ಕುಳಿತಿರುವ ಕೆಲವರು ಪಂಜಾಬ್‌ ಅನ್ನು ಪ್ರತಿನಿಧಿಸಲ್ಲ ಎಂದು ಕಿಡಿಕಾಡಿದ್ದಾರೆ.

  • “Jhanda Ooncha Rahe Hamara”- UK Govt must act against those miscreants who attempted to disrespect Indian Flag at High Commission,London.Punjab & Punjabis have a glorious track record of serving/protecting the Nation.Handful of jumping jacks sitting in UK do not represent Punjab. pic.twitter.com/TJrNAZcdmf

    — Jaiveer Shergill (@JaiveerShergill) March 20, 2023 " class="align-text-top noRightClick twitterSection" data=" ">

ಖಲಿಸ್ತಾನಿ ಪರ ಪ್ರತಿಭಟನಾಕಾರರು ಲಂಡನ್‌ನಲ್ಲಿ ರಾಷ್ಟ್ರ ಧ್ವಜವನ್ನು ಕೆಳಗಿಳಿಸುತ್ತಿರುವ ದೃಶ್ಯಗಳು ಭಾರತವನ್ನು ಕೆರಳಿಸಿದ್ದವು. ಸಾಮಾಜಿಕ ಮಾಧ್ಯಮದಲ್ಲಿ ಹಲವರು ಖಲಿಸ್ತಾನಿಗಳ ನಡೆಯನ್ನು ಖಂಡಿಸಿದ್ದರು. ಈ ವೇಳೆ ಭಾರತ ಧ್ವಜವನ್ನು ತೆಗೆದುಕೊಂಡು, ಖಲಿಸ್ತಾನಿ ಧ್ವಜವನ್ನು ಕಿತ್ತೆಸೆಯುತ್ತಿರುವ ಭಾರತೀಯ ಹೈಕಮಿಷನ್‌ ಅಧಿಕಾರಿಯ ದಿಟ್ಟತನಕ್ಕೆ ಭಾರತೀಯರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಹೀಗಿದೆ..: ಖಲಿಸ್ತಾನ್‌ ಪರ ಪ್ರತ್ಯೇಕತಾವಾದಿಗಳು ಲಂಡನ್‌ನಲ್ಲಿನರುವ ಭಾರತೀಯ ಹೈಕಮಿಷನ್‌ ಕಚೇರಿ ಮೇಲಿನ ತ್ರಿವರ್ಣ ಧ್ವಜ ಕೆಳಗಿಳಿಸಿ ಬಳಿಕ ಖಲಿಸ್ತಾನ್ ಧ್ವಜ ಹಾರಿಸಿದ್ದರು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿತ್ತು. ಘಟನೆಯ ನಂತರ, ವಿದೇಶಾಂಗ ಸಚಿವಾಲಯ ಭಾನುವಾರ ಸಂಜೆ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಕ್ರಿಸ್ಟಿನಾ ಸ್ಕಾಟ್ ಅವರನ್ನು ಕರೆಸಿಕೊಂಡು ಹೈಕಮಿಷನ್ ಆವರಣದಲ್ಲಿ ಭದ್ರತಾ ಲೋಪದ ಬಗ್ಗೆ ವಿವರಣೆ ಕೇಳಿತ್ತು. ಭಾರತೀಯ ರಾಜತಾಂತ್ರಿಕರು ಮತ್ತು ಸಿಬ್ಬಂದಿಗೆ ಯುಕೆ ಸರ್ಕಾರದ ಉದಾಸೀನತೆಯ ಬಗ್ಗೆ ಸಚಿವಾಲಯ ತನ್ನ ಅತೃಪ್ತಿ ವ್ಯಕ್ತಪಡಿಸಿತು. ಇದನ್ನು ಸ್ವೀಕಾರಾರ್ಹವಲ್ಲ ಎಂದು ಕಟುವಾಗಿ ಪ್ರತಿಕ್ರಿಯಿಸಿತ್ತು.

ಘಟನೆಗೆ ಸಂಬಂಧಿಸಿದಂತೆ ಬ್ರಿಟನ್‌ನ ವಿದೇಶಾಂಗ ಕಾಮನ್‌ವೆಲ್ತ್ ಮತ್ತು ಅಭಿವೃದ್ಧಿ ವ್ಯವಹಾರಗಳ ರಾಜ್ಯ ಸಚಿವ ಲಾರ್ಡ್ ತಾರಿಕ್ ಅಹ್ಮದ್ ಟ್ವೀಟ್‌ ಮಾಡಿದ್ದಾರೆ. "ಭಾರತೀಯ ಹೈಕಮಿಷನ್ ಮೇಲಿನ ದಾಳಿಯಿಂದ ಆತಂಕಗೊಂಡಿದ್ದೇನೆ ಎಂದಿದ್ದಾರೆ. ಅದರ ಜತೆಗೆ ಇಂತಹ ದಾಳಿ ಒಪ್ಪಿಕೊಳ್ಳುವಂತದ್ದಲ್ಲ. ಬ್ರಿಟನ್‌ ಸರ್ಕಾರ ಯಾವಾಗಲೂ ಭಾರತೀಯ ಹೈಕಮಿಷನ್‌ನ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸುತ್ತದೆ" ಎಂದು ಅವರು ಹೇಳಿದ್ದಾರೆ.

ಈ ಘಟನೆಯು ವಿದೇಶಗಳಲ್ಲಿನ ಭಾರತೀಯ ರಾಜತಾಂತ್ರಿಕರು ಮತ್ತು ಸಿಬ್ಬಂದಿ ಭದ್ರತೆಯ ಬಗ್ಗೆ ಕಳವಳವನ್ನು ಉಂಟುಮಾಡಿದೆ. ಇಂತಹ ಘಟನೆಗಳನ್ನು ಲಘುವಾಗಿ ಪರಿಗಣಿಸಲಾಗುವುದಿಲ್ಲ ಮತ್ತು ವಿದೇಶದಲ್ಲಿರುವ ಭಾರತೀಯ ಮಿಷನ್‌ಗಳ ಸುರಕ್ಷತೆ ಮತ್ತು ಭದ್ರತೆಯು ಅತ್ಯಂತ ಮಹತ್ವದ್ದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಒತ್ತಿ ಹೇಳಿದೆ.

112 ಜನರ ಬಂಧನ: ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌ ಬಂಧನಕ್ಕೆ ಪಂಜಾಬ್‌ ಪೊಲೀಸರು ಬೃಹತ್‌ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ 112 ಜನರನ್ನು ಪಂಜಾಬ್‌ ಪೊಲೀಸರು ಬಂಧಿಸಿದ್ದಾರೆ. ಇದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಭಾಗವಾಗಿಯೇ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ ಕಚೇರಿಯ ಮೇಲಿನ ತ್ರಿವರ್ಣ ಧ್ವಜವನ್ನು ದುಷ್ಕರ್ಮಿಗಳು ಕೆಳಗಿಳಿಸಿದ್ದಾರೆ. ಬ್ರಿಟನ್‌ನಲ್ಲಿರುವ ಭಾರತೀಯ ವಲಸಿಗರು ಕೂಡ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೃತ್ಯವನ್ನು ಖಂಡಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ಲಂಡನ್‌ ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ತ್ರಿವರ್ಣ ಧ್ವಜ ಕೆಳಗಿಳಿಸಿ ಖಲಿಸ್ತಾನಿಗಳ ಅಟ್ಟಹಾಸ!

Last Updated : Mar 20, 2023, 12:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.