ಕೌಶಂಬಿ: ಜಿಲ್ಲೆಯ ಸಿರಾತು ಕ್ಷೇತ್ರದಿಂದ ಸೋಲಿನ ರುಚಿ ಕಂಡ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು, ತನಗೆ ಮತ ನೀಡಿದವರಿಗೆ ಕೃತಜ್ಞತೆ ಸಲ್ಲಿಸಿದರೂ ಜನರ ನಿರ್ಧಾರವನ್ನು ಮನಸ್ಪೂರ್ತಿಯಾಗಿ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.
-
सिराथू विधानसभा क्षेत्र की जनता के फ़ैसले को विनम्रतापूर्वक स्वीकार करता हूँ,एक एक कार्यकर्ता के परिश्रम के लिए आभारी हूँ,जिन मतदाताओं ने वोट रूपी आशीर्वाद दिया उनके प्रति कृतज्ञता ज्ञापित करता हूँ,
— Keshav Prasad Maurya (@kpmaurya1) March 10, 2022 " class="align-text-top noRightClick twitterSection" data="
">सिराथू विधानसभा क्षेत्र की जनता के फ़ैसले को विनम्रतापूर्वक स्वीकार करता हूँ,एक एक कार्यकर्ता के परिश्रम के लिए आभारी हूँ,जिन मतदाताओं ने वोट रूपी आशीर्वाद दिया उनके प्रति कृतज्ञता ज्ञापित करता हूँ,
— Keshav Prasad Maurya (@kpmaurya1) March 10, 2022सिराथू विधानसभा क्षेत्र की जनता के फ़ैसले को विनम्रतापूर्वक स्वीकार करता हूँ,एक एक कार्यकर्ता के परिश्रम के लिए आभारी हूँ,जिन मतदाताओं ने वोट रूपी आशीर्वाद दिया उनके प्रति कृतज्ञता ज्ञापित करता हूँ,
— Keshav Prasad Maurya (@kpmaurya1) March 10, 2022
ಸಿರಾತು ವಿಧಾನಸಭಾ ಕ್ಷೇತ್ರದ ಜನತೆಯ ನಿರ್ಧಾರವನ್ನು ಮನಸ್ಪೂರ್ತಿಯಾಗಿ ಸ್ವೀಕರಿಸುತ್ತೇನೆ. ಪ್ರತಿಯೊಬ್ಬ ಕಾರ್ಯಕರ್ತರ ಶ್ರಮಕ್ಕೆ ನಾನು ಆಭಾರಿಯಾಗಿದ್ದೇನೆ. ಮತದ ರೂಪದಲ್ಲಿ ಆಶೀರ್ವಾದ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮೌರ್ಯ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಓದಿ: ಹತ್ತು ವರ್ಷದಲ್ಲೇ ಬದಲಾದ ಮನ್ ಹಣೆಬರಹ: ಪಂಜಾಬ್ ಸಿಎಂ ಗದ್ದುಗೆ ಏರಲಿದ್ದಾರೆ ಕಾಮಿಡಿಯನ್!
ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಪಲ್ಲವಿ ಪಟೇಲ್ ವಿರುದ್ಧ ಮೌರ್ಯ 7,337 ಮತಗಳಿಂದ ಸೋತಿದ್ದಾರೆ. ಮೌರ್ಯ 98,941 ಮತಗಳನ್ನು ಪಡೆದರೆ, ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಅವರ ಹಿರಿಯ ಸಹೋದರಿ ಪಲ್ಲವಿ ಪಟೇಲ್ 1,06,278 ಮತಗಳನ್ನು ಪಡೆದರು.
ಮೌರ್ಯ ಅವರು 2012 ರಲ್ಲಿ ಸಿರಾತು ಕ್ಷೇತ್ರವನ್ನು ಗೆದ್ದಿದ್ದರು. ಆದರೆ, 2017 ರ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಪ್ರತ್ಯೇಕ ಟ್ವೀಟ್‌ನಲ್ಲಿ ಮೌರ್ಯ, ಚುನಾವಣೆಯಲ್ಲಿ ಸಹಕರಿಸಲು ಹಗಲಿರುಳು ಶ್ರಮಿಸಿದ ಎಲ್ಲ ಬೆಂಬಲಿಗರು, ಸ್ನೇಹಿತರು ಮತ್ತು ಹಿತೈಷಿಗಳಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಇದು ನಮಗೆಲ್ಲರಿಗೂ ಸಂತೋಷದ ವಿಷಯವಾಗಿದೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳಿಂದಾಗಿ ಬಿಜೆಪಿ ಮತ್ತೆ ನಾಲ್ಕು ರಾಜ್ಯಗಳಲ್ಲಿ ಸರ್ಕಾರ ರಚಿಸುತ್ತಿದೆ ಎಂದು ಹೇಳಿದರು.
ಉತ್ತರಪ್ರದೇಶದಲ್ಲಿ ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಭಾರಿ ಗೆಲುವನ್ನು ದಾಖಲಿಸಿದೆ. ಆದ್ರೆ ಅವರ ಸೋಲು ಅಚ್ಚರಿ ಮೂಡಿಸಿದೆ. ಉಪಮುಖ್ಯಮಂತ್ರಿಯಾಗಿದ್ದ ಕೇಶವ ಪ್ರಸಾದ್ ಮೌರ್ಯ, ಸಿಎಂ ಯೋಗಿ ಆದಿತ್ಯನಾಥ ಅವರೊಂದಿಗೆ ಮನಸ್ಥಾಪ ಹೊಂದಿದ್ದರು. ಚುನಾವಣೆಗೂ ಮುನ್ನ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೆಳಗಿಳಿಸಿ, ಸಿಎಂ ಗಾದಿಗೆ ಏರುವ ಪ್ರಯತ್ನ ನಡೆದಿತ್ತು.
ಆದರೆ ಪ್ರಧಾನಿ ನರೇಂದ್ರ ಮೋದಿ ಸಿಎಂ ಯೋಗಿ ಅವರ ಬೆಂಬಲಕ್ಕೆ ನಿಂತು ಸಿಎಂ ಬದಲಾವಣೆಯನ್ನು ತಳ್ಳಿ ಹಾಕಿದ್ದರು. ಈಗ ಚುನಾವಣೆಯಲ್ಲಿ ಪಕ್ಷ ಗೆದ್ದರೂ ಮೌರ್ಯ ಸೋಲುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ.