ನವದೆಹಲಿ/ಗಾಜಿಯಾಬಾದ್: ಮದುವೆ ಮಾಡಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿಯೋರ್ವಳು ಲವರ್ ಜೊತೆ ನಗ್ನವಾಗಿ ವಿಡಿಯೋ ಕಾಲ್ ಮಾಡ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಗಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾನೆ. ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ಹೆಂಡತಿ ಮೇಲೆ ಅನುಮಾನ ಬಂದಿರುವ ಕಾರಣಕ್ಕಾಗಿ ಮನೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, ಅದರ ವೀಕ್ಷಣೆ ಮಾಡಿರುವ ಗಂಡನಿಗೆ ಸತ್ಯಾಂಶ ಗೊತ್ತಾಗಿದೆ. ಬಳಿಕ, ಗಾಜಿಯಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾನೆ.
ಗಾಜಿಯಾಬಾದ್ನ ಕವಿನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಳೆದ ಕೆಲ ತಿಂಗಳಿಂದ ಹೆಂಡತಿ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾಳೆಂದು ದೂರಿನಲ್ಲಿ ತಿಳಿಸಿದ್ದಾನೆ. ಗಂಡ ಮನೆಯಿಂದ ಹೊರಹೊಗುತ್ತಿದ್ದಂತೆ ದೆಹಲಿಯ ದುರ್ಗಾಪುರಿ ಪ್ರದೇಶದಲ್ಲಿ ವಾಸವಾಗಿದ್ದ ಲವರ್ಗೆ ವಿಡಿಯೋ ಕಾಲ್ ಮಾಡ್ತಿದ್ದ ಯುವತಿ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಳು. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಗಳ ನಗ್ನ ವಿಡಿಯೋ ಮಾಡಿದ ಪಾಪಿ ತಾಯಿ
ಇಷ್ಟೇ ಅಲ್ಲದೇ, ಯುವತಿ ತನ್ನ 13 ವರ್ಷದ ಮಗಳ ನಗ್ನ ವಿಡಿಯೋ ಸಹ ಮಾಡಿದ್ದಾಳೆಂದು ದೂರಿನಲ್ಲಿ ದಾಖಲು ಮಾಡಲಾಗಿದೆ. ಇದಕ್ಕೆ ಸಂಬಂಧಿಸಿರುವ ವಿಡಿಯೋ ಸಹ ಆತ ಪೊಲೀಸರಿಗೆ ನೀಡಿದ್ದಾನೆ. ಇದರ ಬೆನ್ನಲ್ಲೇ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಆರಂಭ ಮಾಡಿದ್ದಾರೆ.