ಮಿರ್ಜಾಪುರ (ಉತ್ತರ ಪ್ರದೇಶ) : ಮಿರ್ಜಾಪುರ ಜಿಲ್ಲೆಯಲ್ಲಿ ಪತಿ ತನ್ನ ಪತ್ನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಗಂಡ ಬಲವಂತವಾಗಿ ಮನೆಗೆ ನುಗ್ಗಿ ಅಶ್ಲೀಲ ಕೃತ್ಯ ಎಸಗಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿರಲಿಲ್ಲ. ಬಳಿಕ ಮಹಿಳೆ ನ್ಯಾಯಾಲಯದ ಮೊರೆ ಹೋಗಿದ್ದರು. ಇದಾದ ಐದು ತಿಂಗಳ ನಂತರ ಕೋರ್ಟ್ ಆದೇಶದ ಮೇರೆಗೆ ಪೊಲೀಸ್ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದೆ.
ಹೌದು, ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ ಹಲಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದ ಮಹಿಳೆಯೊಬ್ಬರು ಜುಲೈ 29 ರಂದು ತನ್ನ ಪತಿ, ನಮ್ಮ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮನೆಗೆ ನುಗ್ಗಿದ ಬಳಿಕ ಪತ್ನಿ ಮೇಲೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರುದಾರೆ ಆರೋಪಿಸಿದ್ದಾರೆ. ಪತಿ - ಪತ್ನಿಯ ನಡುವೆ ಜಗಳ ನಡೆಯುತ್ತಿದ್ದು, ಈ ಸಂಬಂಧ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಬಹಳ ದಿನಗಳಿಂದ ಇಬ್ಬರೂ ಪ್ರತ್ಯೇಕ ಮನೆಗಳಲ್ಲಿ ವಾಸಿಸುತ್ತಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಹಲಿಯಾ ಪೊಲೀಸ್ ಠಾಣೆ ಪ್ರಭಾರಿ ವಿಷ್ಣು ಪ್ರಭಾ ಸಿಂಗ್, " ಸಂತ್ರಸ್ತೆ ಪ್ರತಿಭಟನೆ ನಡೆಸಿದರೆ ಕೊಲೆ ಮಾಡುವುದಾಗಿ ಆಕೆಯ ಪತಿ ಬೆದರಿಕೆ ಹಾಕಿದ್ದಾನೆ. ಪತಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬಳಿಕ, ಆಕೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ನ್ಯಾಯಾಲಯ ಆದೇಶ ನೀಡಿದ್ದು, ಬಳಿಕ ಪೊಲೀಸರು ಕ್ರಮ ಕೈಗೊಂಡು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಐದು ತಿಂಗಳ ನಂತರ ಕೋರ್ಟ್ ಆದೇಶದ ಮೇರೆಗೆ ಪೊಲೀಸರು ಪತಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ" ಎಂದು ಹೇಳಿದರು.
ಇದನ್ನೂ ಓದಿ : ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಬಹುದೇ? : ಈ ಕುರಿತು ಪರಿಶೀಲಿಸಲು ಒಪ್ಪಿಗೆ ನೀಡಿದ ಸುಪ್ರೀಂ
ಈ ಪ್ರಕರಣದ ವಿಚಾರಣೆ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ನ್ಯಾಯಾಲಯದ ಆದೇಶದಂತೆ ಪತಿ ವಿರುದ್ಧ ಅತ್ಯಾಚಾರ ಸೇರಿದಂತೆ ಇತರ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಪೊಲೀಸ್ ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬೀಳಬೇಕಿದೆ.
ಇದನ್ನೂ ಓದಿ : ಮೈಸೂರು: ಅತ್ಯಾಚಾರ ಅಪರಾಧಿಗೆ ದಂಡಸಮೇತ 10 ವರ್ಷ ಜೈಲು ಶಿಕ್ಷೆ