ಚಾದರ್‌ಘಾಟ್ (ತೆಲಂಗಾಣ): ಕುಡುಕ ತಂದೆ ಸ್ವತಃ ತನ್ನ ಒಂದು ತಿಂಗಳ ಮಗುವನ್ನು 70 ಸಾವಿರ ರೂಪಾಯಿಗೆ ಮಾರಾಟ ಮಾಡಿದ ಆರೋಪದಲ್ಲಿ ಪೊಲೀಸರಿಗೆ ಸೆರೆಯಾಗಿರುವ ಘಟನೆ ಹೈದರಾಬಾದ್ನ ಚಾದರ್ಘಾಟ್ನಲ್ಲಿ ನಡೆದಿದೆ.
ಮಗುವಿನ ತಾಯಿ ಚಾದರ್‌ಘಾಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಸದ್ಯಕ್ಕೆ ಆರೋಪಿಯನ್ನು ಬಂಧಿಸಿ, ಮಗುವನ್ನು ರಕ್ಷಿಸಿ, ತಾಯಿಗೆ ಹಸ್ತಾಂತರ ಮಾಡಿದ್ದಾರೆ.
ಇದನ್ನೂ ಓದಿ: 4 ವರ್ಷದ ಕಂದಮ್ಮನ ಮೇಲೆ ತಂದೆಯಿಂದಲೇ ಅತ್ಯಾಚಾರ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಾದರ್‌ಘಾಟ್ ಸರ್ಕಲ್ ಇನ್ಸ್ಪೆಕ್ಟರ್ ಸತೀಶ್, ಆರೋಪಿ ಮದ್ಯವ್ಯಸನಿಯಾಗಿದ್ದು, ಹಣಕಾಸಿನ ತೊಂದರೆ ಎದುರಿಸುತ್ತಿದ್ದನು. ಇದರಿಂದ 70 ಸಾವಿರ ರೂಪಾಯಿಗೆ ಮಗುವನ್ನು ಮಾರಿದ್ದನು ಎಂದು ಸ್ಪಷ್ಟನೆ ನೀಡಿದ್ದಾರೆ.
ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ 317ನೇ ಕಲಂ ಹಾಗೂ ಇತರ ಕಲಂಗಳ ಅಡಿಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.