ಹೈದರಾಬಾದ್ (ತೆಲಂಗಾಣ): ಹೈದರಾಬಾದ್‌ನ ಖಾಸಗಿ ಶಾಲೆಯೊಂದರಲ್ಲಿ ನಡೆದ ನಾಲ್ಕೂವರೆ ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 34 ವರ್ಷದ ಅಪರಾಧಿಗೆ ಸ್ಥಳೀಯ ಫಾಸ್ಟ್ ಟ್ರ್ಯಾಕ್ ಪೋಕ್ಸೋ ನ್ಯಾಯಾಲಯವು ಮಂಗಳವಾರ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಐದು ಸಾವಿರ ರೂ. ದಂಡ ಕೂಡ ವಿಧಿ ಆದೇಶಿಸಿದೆ.
ಶಾಲೆಯ ಮಹಿಳಾ ಪ್ರಾಂಶುಪಾಲರ ಕಾರು ಚಾಲಕ ಈ ಶಿಕ್ಷೆಗೆ ಗುರಿಯಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿ ತಪ್ಪಿತಸ್ಥ ಎಂದು ತೀರ್ಪು ನೀಡಿದೆ. ಇದೇ ವೇಳೆ, ಪ್ರಕರಣದಲ್ಲಿ ನಿರ್ಲಕ್ಷ್ಯ ಆರೋಪ ಎದುರಿಸಿದ್ದ ಪ್ರಾಂಶುಪಾಲೆಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಪ್ರಕರಣದ ಹಿನ್ನೆಲೆ: ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರ ಅಕ್ಟೋಬರ್‌ನಲ್ಲಿ ವರದಿಯಾಗಿದ್ದ ಶಾಲಾ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಕಳೆದ ಐದು ತಿಂಗಳಿನಿಂದ ಶಾಲೆಯಲ್ಲಿ ಓದುತ್ತಿರುವ ತನ್ನ ಮಗಳು ಮೇಲೆ ತನ್ನ ಕಾಲುಗಳಲ್ಲಿ ಸ್ವಲ್ಪ ನೋವುಂಟಾಗಿತ್ತು. ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಶಾಲೆಯಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಶಾಲಾ ಆವರಣದಲ್ಲಿರುವ ತನ್ನ ಪ್ರತ್ಯೇಕ ಕೋಣೆಗೆ ಕರೆದೊಯ್ದು ಮೂರು ತಿಂಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ತಿಳಿಸಿದ್ದಾಳೆ ಎಂದು ಸಂತ್ರಸ್ತೆಯ ತಾಯಿ ಆ ವರ್ಷದ ಅಕ್ಟೋಬರ್ 18ರಂದು ಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಘಟನೆಯ ವಿಷಯ ತಿಳಿದ ಪೋಷಕರು ಶಾಲೆಗೆ ಧಾವಿಸಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರಾಂಶುಪಾಲರ ನಿರ್ಲಕ್ಷ್ಯ ಸಹ ಕಾರಣ ಎಂದು ಆಕ್ರೋಶ ಹೊರಹಾಕಿದ್ದರು. ನಂತರದಲ್ಲಿ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಾಂಶುಪಾಲೆಯ ಕಾರು ಚಾಲಕನನ್ನು ಪತ್ತೆ ಹಚ್ಚಿ ಬಂಧಿಸಿದ್ದರು. ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿಯು ಬಾಲಕಿಯನ್ನು ಶಾಲೆಯ ಕೋಣೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಬೀತಾಗಿತ್ತು.