ETV Bharat / bharat

ಹೆಂಡ್ತಿ-ಮಕ್ಕಳನ್ನು ಕತ್ತರಿಯಿಂದ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ - ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ದುರಂತ

ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

Hyderabad man kills wife  Hyderabad man kills wife and two kids  Hyderabad man hangs self  Hyderabad man suicide  ಹೆಂಡ್ತಿ ಮಕ್ಕಳನ್ನು ಕತ್ತಿರಿಯಿಂದ ಕೊಲೆ  ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ  ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆ  ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ದುರಂತ  ನೇಣು ಬಿಗಿದುಕೊಂಡು ಆತ್ಮಹತ್ಯೆ
ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
author img

By

Published : Oct 17, 2022, 2:56 PM IST

ಹೈದರಾಬಾದ್(ತೆಲಂಗಾಣ): ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿ ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಗರದಲ್ಲಿ ವರದಿಯಾಗಿದೆ.

ಸೆರಿಲಿಂಗಂಪಲ್ಲಿಯ ಪಾಪಿರೆಡ್ಡಿ ಕಾಲೋನಿಯಲ್ಲಿ ನಡೆದಿರುವ ಘಟನೆ ಬಗ್ಗೆ ಸ್ಥಳೀಯರು ಮತ್ತು ಪೊಲೀಸರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ, ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಸಮೀಪದ ಕೋಹಿರ್ ನಿವಾಸಿ ನಾಗರಾಜು ಪಾಪಿರೆಡ್ಡಿ ಕಾಲೋನಿಯಲ್ಲಿ ಕುಟುಂಬ ಸಮೇತ ಕೆಲ ದಿನಗಳಿಂದ ವಾಸವಾಗಿದ್ದರು. ಸೇಲ್ಸ್‌ಮ್ಯಾನ್‌ ಆಗಿ ಕೆಲಸ ಮಾಡುತ್ತ ಜೀವನ ಸಾಗಿಸುತ್ತಿದ್ದರು. ಇವರ ಪತ್ನಿ ಸುಜಾತಾ ಮನೆಯಲ್ಲಿ ಟೈಲರ್ ಕೆಲಸ ಮಾಡುತ್ತಿದ್ದರು. ನಾಗರಾಜು ಆಗಾಗ್ಗೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದರು. ಶುಕ್ರವಾರ ರಾತ್ರಿಯೂ ಇವರ ನಡುವೆ ಜಗಳ ಆಗಿತ್ತು ಎನ್ನಲಾಗ್ತಿದೆ.

ಇವರ ಜಗಳ ವಿಕೋಪಕ್ಕೆ ತಿರುಗಿದ್ದು, ಟೈಲರಿಂಗ್ ಕತ್ತರಿಯಿಂದ ಪತ್ನಿ ಹಾಗೂ 11 ವರ್ಷದ ಮಗ ಮತ್ತು 7 ವರ್ಷದ ಪುತ್ರಿಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ನಂತರ ನಾಗರಾಜು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ದಿನಗಳಿಂದ ಬಾಗಿಲು ಮುಚ್ಚಿತ್ತು. ದುರ್ವಾಸನೆಯಿಂದ ಸ್ಥಳೀಯರು ಮನೆ ಬಾಗಿಲು ಮುರಿದು ಒಳಗೆ ನುಗ್ಗಿದಾಗ ವಿಷಯ ಬೆಳಕಿಗೆ ಬಂದಿದೆ.

ಸ್ಥಳೀಯರು ನಾಗರಾಜು ಕುಟುಂಬವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೆರಿಲಿಂಗಂಪಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಕ್ಕೆ ಯಾವುದೇ ಆರ್ಥಿಕ ಸಮಸ್ಯೆ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಓದಿ: ಹೃದಯವಿದ್ರಾವಕ ಘಟನೆ: ಕೊಲೆಯಾದ ಮಗಳು, ಆತ್ಮಹತ್ಯೆ ಮಾಡಿಕೊಂಡ ತಂದೆ, ತಾಯಿಗೆ ಕ್ಯಾನ್ಸರ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.