ನವದೆಹಲಿ : ಆದಾಯ ಹೆಚ್ಚಾಗಿದೆ ಎಂದು ಬಿಜೆಪಿ ಸಚಿವರು ಹೇಳಿದ್ದಾರೆ. ಆದರೆ, ಆದಾಯ ಹೆಚ್ಚಾಗಿರುವುದು ಸಚಿವರದ್ದು ಮಾತ್ರ, ಸಾರ್ವಜನಿಕರದ್ದಲ್ಲ ಎಂದು ಕಾಂಗ್ರೆಸ್ ನಾಯಕ, ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸಲಾಗಿದೆ. ಬಿಜೆಪಿಯವರು ಬಡ ಜನರ ಬಗ್ಗೆ ಯೋಚಿಸುವುದಿಲ್ಲ.
ಕೇವಲ ಧರ್ಮಾಧಾರಿತ ರಾಜಕೀಯ ಮಾಡುತ್ತಾರೆ ಎಂದು ಆರೋಪಿಸಿದರು. 2022ರಲ್ಲಿ ಯುಪಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸುವ ಮೂಲಕ ಜನರು ಬಿಜೆಪಿಯನ್ನು ಕಿತ್ತೊಗೆಯುತ್ತಾರೆ ಎಂದು ಕಪಿಲ್ ಸಿಬಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.