ಹೈದರಾಬಾದ್ : ತೆಲಂಗಾಣ ರಾಜ್ಯಪಾಲೆ ತಮಿಳಿಸೈ ತಮ್ಮ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ಅಲ್ಲದೆ ತಮ್ಮ ಖಾಸಗಿತನಕ್ಕೆ ಧಕ್ಕೆಯಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರು ದೂರಿದ್ದಾರೆ.
ಈ ಬಗ್ಗೆ ರಾಜ್ಯಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ರಾಜಭವನ ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯುತ್ತಿದೆ. ಆದರೆ ಫಾರ್ಮ್ಹೌಸ್ನಲ್ಲಿ ನಡೆದ ಶಾಸಕರ ಖರೀದಿ ಯತ್ನ ಪ್ರಕರಣದಲ್ಲಿ ರಾಜಭವನವನ್ನು ಎಳೆದು ತರುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ಈ ಪ್ರಕರಣದಲ್ಲಿ ನಮ್ಮ ಮಾಜಿ ಎಡಿಸಿ ತುಷಾರ್ ಅವರ ಹೆಸರನ್ನು ಎಳೆದು ತರಲಾಗುತ್ತಿದೆ. ತುಷಾರ್ ದೀಪಾವಳಿ ಶುಭಾಶಯ ಕೋರಲೆಂದು ಕರೆ ಮಾಡಿದ್ದರು. ಇದರ ನಂತರ ಅವರ ಹೆಸರನ್ನು ತೇಲಿಬಿಡಲಾಗುತ್ತಿದೆ ಎಂದು ಹೇಳಿದರು. ಇದನ್ನೇ ಉಲ್ಲೇಖಿಸಿ ರಾಜ್ಯಪಾಲರು ತಮ್ಮ ಫೋನ್ ಕದ್ದಾಲಿಕೆ ಆಗುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ತೆಲಂಗಾಣದೊಂದಿಗೆ ದೆಹಲಿ, ಆಂಧ್ರ ಸರ್ಕಾರಗಳನ್ನೂ ಉರುಳಿಸಲು ಪಿತೂರಿ: ಬಿಜೆಪಿ ವಿರುದ್ಧ ಕೆಸಿಆರ್ ಆರೋಪ