ಪಣಜಿ(ಗೋವಾ): ಗೋವಾ ಮಾಜಿ ಸಿಎಂ, ಕೇಂದ್ರದ ಮಾಜಿ ರಕ್ಷಣಾ ಸಚಿವರಾಗಿದ್ದ ದಿವಂಗತ ಮನೋಹರ್ ಪರಿಕ್ಕರ್ ಅವರ ಮಗನಿಗೆ ಬಿಜೆಪಿ ಟಿಕೆಟ್ ನಿರಾಕರಣೆ ಮಾಡಿದ್ದು, ಇದರ ಬೆನ್ನಲ್ಲೇ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಪಣಜಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಭಾರತೀಯ ಜನತಾ ಪಾರ್ಟಿಗೆ ಟಾಂಗ್ ನೀಡಿದ್ದಾರೆ.
ಕಳೆದ 25 ವರ್ಷಗಳಿಂದಲೂ ಮನೋಹರ್ ಪರಿಕ್ಕರ್ ಪ್ರತಿನಿಧಿಸುತ್ತಿದ್ದ ಪಣಜಿ ವಿಧಾನಸಭಾ ಕ್ಷೇತ್ರದಿಂದ ಉತ್ಪಲ್ ಬದಲಿಗೆ ಪಟ್ನೇಕರ್ ಅವರಿಗೆ ಟಿಕೆಟ್ ನೀಡಿ ಬಿಜೆಪಿ ಹೈಕಮಾಂಡ್ ನಿನ್ನೆ ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ಇಂದು ಹೇಳಿಕೆ ನೀಡಿರುವ ಪರಿಕ್ಕರ್ ಮಗ ಉತ್ಪಲ್ ತಾವು ಪಣಜಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ತಂದೆಯ ಕ್ಷೇತ್ರದಿಂದಲೇ ರಾಜಕೀಯ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಉತ್ಪಲ್ ಪರಿಕ್ಕರ್ಗೆ ಬಿಜೆಪಿ ಟಿಕೆಟ್ ನಿರಾಕರಣೆ ಮಾಡುತ್ತಿದ್ದಂತೆ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ ಪಕ್ಷ ಸೇರುವಂತೆ ಆಹ್ವಾನ ನೀಡಿದ್ದರು. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡದ ಉತ್ಪಲ್ ಇಂದು ಈ ಮಹತ್ವದ ಘೋಷಣೆ ಮಾಡಿದ್ದಾರೆ.
-
I will be contesting as an Independent candidate from Panaji constituency: Utpal Parrikar, son of late former CM Manohar Parrikar#GoaElections pic.twitter.com/FsBomEeRwk
— ANI (@ANI) January 21, 2022 " class="align-text-top noRightClick twitterSection" data="
">I will be contesting as an Independent candidate from Panaji constituency: Utpal Parrikar, son of late former CM Manohar Parrikar#GoaElections pic.twitter.com/FsBomEeRwk
— ANI (@ANI) January 21, 2022I will be contesting as an Independent candidate from Panaji constituency: Utpal Parrikar, son of late former CM Manohar Parrikar#GoaElections pic.twitter.com/FsBomEeRwk
— ANI (@ANI) January 21, 2022
ಇದನ್ನೂ ಓದಿರಿ: ಪರಿಕ್ಕರ್ ಪುತ್ರನಿಗೆ 'ಬಿಜೆಪಿ' ಟಿಕೆಟ್ ನಿರಾಕರಣೆ.. AAP ಸೇರುವಂತೆ ಕೇಜ್ರಿವಾಲ್ ಆಫರ್
ಗೋವಾ ವಿಧಾನಸಭೆ ಚುನಾವಣೆ ಫೆ. 14ರಂದು ನಡೆಯಲಿದ್ದು, 40 ಕ್ಷೇತ್ರಗಳ ಪೈಕಿ 34 ಸ್ಥಾನಗಳಿಗಾಗಿ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿ, ಪಟ್ಟಿ ಪ್ರಕಟಿಸಿದೆ. ಆದರೆ, ಪಣಜಿ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಇಂಗಿತ ವ್ಯಕ್ತಪಡಿಸಿದ್ದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಮಗ ಉತ್ಪಲ್ಗೆ ಟಿಕೆಟ್ ನಿರಾಕರಿಸಿ ಹಾಲಿ ಶಾಸಕನಿಗೆ ಮಣೆ ಹಾಕಲಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ