ETV Bharat / bharat

ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರದ ಬಗ್ಗೆ ಅಧ್ಯಯನ ನಡೆಸಲು ಮುಂದಾದ ICMR-NIV - ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ

ಭಾರತದಲ್ಲಿ ಲಭ್ಯವಿರುವ ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳು ಡೆಲ್ಟಾ ಪ್ಲಸ್ ರೂಪಾಂತರದ ವಿರುದ್ಧ ಪರಿಣಾಮಕಾರಿಯಾಗಿದೆಯೇ ಇಲ್ಲವೇ ಎಂಬುದರ ಕುರಿತು ಐಸಿಎಂಆರ್-ಎನ್ಐವಿ ಅಧ್ಯಯನ ನಡೆಸಲಿದೆ.

ICMR, NIV launches study on Delta Plus Covid variant
ಐಸಿಎಂಆರ್-ಎನ್ಐವಿ
author img

By

Published : Jun 25, 2021, 10:19 AM IST

ಪುಣೆ (ಮಹಾರಾಷ್ಟ್ರ): ದೇಶದಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಕಡಿಮೆಯಾಗುತ್ತಿರುವ ಬೆನ್ನಲ್ಲೇ ವೈರಸ್​ನ ಡೆಲ್ಟಾ ಪ್ಲಸ್ ರೂಪಾಂತರ ಭೀತಿ ಹುಟ್ಟಿಸುತ್ತಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿದ್ದು, ಈ ಬಗ್ಗೆ ಸೂಕ್ತ ಅಧ್ಯಯನ ನಡೆಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್ಐವಿ) ಮುಂದಾಗಿದೆ.

ಭಾರತದಲ್ಲಿ ಲಭ್ಯವಿರುವ ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳು ಡೆಲ್ಟಾ ಪ್ಲಸ್ ರೂಪಾಂತರದ ವಿರುದ್ಧ ಪರಿಣಾಮಕಾರಿಯಾಗಿದೆಯೇ ಇಲ್ಲವೇ ಎಂಬುದರ ಕುರಿತು ಅಧ್ಯಯನ ಗಮನಹರಿಸಲಿದೆ. ಇದಕ್ಕಾಗಿ ಈಗಾಗಲೇ ಲಸಿಕೆ ಪಡೆದ ಜನರಲ್ಲಿ ಪ್ರತಿಕಾಯಗಳ ತಟಸ್ಥೀಕರಣವನ್ನು ಸೂಕ್ಷ್ಮವಾಗಿ ತಿಳಿಯಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಾರತಕ್ಕೆ ಹೊಸ ಅಪಾಯ ತಂದಿಟ್ಟ ಡೆಲ್ಟಾ ಪ್ಲಸ್​: ವ್ಯಾಕ್ಸಿನ್‌ ಕೆಲಸ ಮಾಡುವುದೇ? ಇಲ್ಲಿದೆ ಪೂರ್ತಿ ವಿವರ..

ಮೊದಲು ಭಾರತದಲ್ಲಿ ಪತ್ತೆಯಾಗಿ ಡೆಲ್ಟಾ (B.1.617.2) ರೂಪಾಂತರದಿಂದ ಡೆಲ್ಟಾ ಪ್ಲಸ್ (K417N) ಹೊರಹೊಮ್ಮಿದೆ. ಇದು ದೇಶದಲ್ಲಿ 2ನೇ ಅಲೆ ಉಲ್ಬಣಕ್ಕೆ ಕಾರಣವಾಗಿದ್ದರೆ, ಡೆಲ್ಟಾ ಪ್ಲಸ್ ಇದಕ್ಕಿಂತಲೂ ಅಪಾಯಕಾರಿಯಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಿಂದ ಒಟ್ಟು 30 ಡೆಲ್ಟಾ ಪ್ಲಸ್ ಕೇಸ್​ಗಳು ವರದಿಯಾಗಿದೆ.

ಡೆಲ್ಟಾ ಪ್ಲಸ್ ರೂಪಾಂತರ ಕಂಡುಬರುವ ಜಿಲ್ಲೆಗಳು ಮತ್ತು ವಲಯಗಳಲ್ಲಿ ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡು, ಟೆಸ್ಟಿಂಗ್​, ಟ್ರ್ಯಾಕಿಂಗ್ ಮತ್ತು ವ್ಯಾಕ್ಸಿನೇಷನ್ ಮಾಡುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.