ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನ ಕಂಡು ಬಂದು ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಭದ್ರತಾ ಪಡೆಗಳು ಸ್ಫೋಟಕವನ್ನು ವಶಪಡಿಸಿಕೊಂಡು ನಿಷ್ಕ್ರಿಯಗೊಳಿಸುವ ಮೂಲಕ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ.
ರಾಜೌರಿ-ಗುರ್ದನ್ ರಸ್ತೆಯ ಗುರ್ದನ್ ಚಾವಾ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಅನುಮಾನಾಸ್ಪದ ಚಲನವಲನ ಕಂಡು ಬಂದಿತ್ತು. ಈ ಬಗ್ಗೆ ಜನರು ಮಾಹಿತಿ ನೀಡಿದ್ದಾರೆ. ಸ್ಪೆಷಲ್ ಆಪರೇಷನ್ ಗ್ರೂಪ್ ಆಫ್ ಪೊಲೀಸ್ ಮತ್ತು ಸೇನಾ ಪಡೆಗಳು ಆ ಸ್ಥಳದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ನಡೆಸಿವೆ.
ಕಾರ್ಯಾಚರಣೆ ವೇಳೆ ರಸ್ತೆಯ ಪಕ್ಕದಲ್ಲಿ ಅನುಮಾನಾಸ್ಪದ ವಸ್ತುವೊಂದು ಕಂಡು ಬಂದಿದೆ. ಪರೀಕ್ಷೆ ನಡೆಸಿದಾಗ ಅದು ಐಇಡಿ ಎಂದು ತಿಳಿದುಬಂದಿದೆ. ನಂತರ, ಬಾಂಬ್ ಸ್ಕ್ವಾಡ್ ಪೊಲೀಸರು ಐಇಡಿಯನ್ನು ಸುರಕ್ಷಿತ ಸ್ಥಳದಲ್ಲಿ ತೆಗದುಕೊಂಡು ಹೋಗಿ ಅದನ್ನು ನಿಷ್ಕ್ರಿಯಗೊಳಿಸಿದ್ದಾರೆ.
ಓದಿ: 3 ಮಕ್ಕಳು ಸೇರಿದಂತೆ ಪತ್ನಿಯನ್ನ ಬರ್ಬರವಾಗಿ ಕೊಂದು ನೇಣಿಗೆ ಶರಣಾದ ಮನೆ ಯಜಮಾನ?