ಚೆನ್ನೈ: ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದರೆ ನಮ್ಮ ಸರ್ಕಾರವು ಮೊದಲ 100 ದಿನಗಳನ್ನು ಜನರ ಸಮಸ್ಯೆಗಳನ್ನು ಪರಿಹರಿಸಲು ಮೀಸಲಿಡುತ್ತೇವೆ ಎಂದು ಡಿಎಂಕೆ ಮುಖ್ಯಸ್ಥ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಎಂ ಕೆ ಸ್ಟಾಲಿನ್ ಭರವಸೆ ನೀಡಿದ್ದಾರೆ.
ಜನವರಿ 29 ರಿಂದ ರಾಜ್ಯದ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ 30 ದಿನಗಳ ಭೇಟಿ ನೀಡಲಿರುವುದಾಗಿ ಸ್ಟಾಲಿನ್ ತಿಳಿಸಿದ್ದು, ಜನರ ಸಮಸ್ಯೆಗಳನ್ನು ಬಗೆಹರಿಸುವುದು ನನ್ನ ಮೊದಲ ಕೆಲಸ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಆಂಧ್ರ ಪೋರಿಗೆ ಒಲಿದುಬಂದ ಬಾಲಪುರಸ್ಕಾರ ಪ್ರಶಸ್ತಿ..
ಡಿಎಂಕೆಯನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿರುವ ಸ್ಟಾಲಿನ್, ಭರವಸೆಗಳ ಮೇಲೆ ಭರವಸೆಗಳನ್ನು ನೀಡುತ್ತಿದ್ದಾರೆ. ಇತ್ತೀಚೆಗಷ್ಟೇ ಡಿಎಂಕೆ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡುವುದಾಗಿ ಆಶ್ವಾಸನೆ ಕೊಟ್ಟಿದ್ದರು.