ಪಾಟ್ನಾ (ಬಿಹಾರ) : ಬಿಹಾರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ. ಇದು ಬಿಹಾರದ ಅಭಿವೃದ್ಧಿಯ ವಿಷಯ ಎಂದು ಅವರು ಬಣ್ಣಿಸಿದ್ದಾರೆ. ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆಯಾದರೆ ಹಿಂದುಳಿದ ಎಲ್ಲಾ ರಾಜ್ಯಗಳಿಗೂ ವಿಶೇಷ ಸ್ಥಾನಮಾನ ನೀಡುತ್ತೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
"ನಾನು ಹಿಂದಿನಿಂದಲೂ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸುತ್ತಿದ್ದೇನೆ ಇಡೀ ಸರ್ಕಾರದ ಪರವಾಗಿ ಅದನ್ನು ಮುಂದುವರಿಸುತ್ತೇನೆ. ನಾನು ಪ್ರತಿ ಸಭೆಯಲ್ಲೂ ಇದನ್ನೇ ಮಾತನಾಡಿದ್ದೇನೆ.ನಮಗೆ ಸರ್ಕಾರ ರಚಿಸಲು ಅವಕಾಶ ಸಿಕ್ಕರೆ, ಖಂಡಿತವಾಗಿಯೂ ಬಿಹಾರದ ಜೊತೆಗೆ ಇತರ ಹಿಂದುಳಿದ ರಾಜ್ಯಗಳಿಗೂ ವಿಶೇಷ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ : ಕಳ್ಳನನ್ನು ರೈಲಿನ ಕಿಟಕಿ ಹೊರಗಿಂದ 15 ಕಿಮೀ ನೇತಾಡಿಸಿದ ಪ್ರಯಾಣಿಕರು.. ಖದೀಮನಿಗೆ ಸಖತ್ ಪಾಠ! ವಿಡಿಯೋ