ETV Bharat / bharat

ಕಾಂಗ್ರೆಸ್​ ರಾಜಸ್ಥಾನದಲ್ಲಿ ಗೆದ್ದರೆ ಕೇಂದ್ರದಲ್ಲಿಯೂ ಅಧಿಕಾರಕ್ಕೆ: ಖರ್ಗೆ ವಿಶ್ವಾಸ

author img

By PTI

Published : Oct 16, 2023, 7:51 PM IST

ರಾಜಸ್ಥಾನದಲ್ಲಿ ಅಧಿಕಾರ ಉಳಿಸಿಕೊಂಡರೆ ಕಾಂಗ್ರೆಸ್​ ಕೇಂದ್ರದಲ್ಲಿಯೂ ಅಧಿಕಾರಕ್ಕೆ ಬರಲಿದೆ ಎಂದು ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

If Cong retains govt in Rajasthan, it will come to power at Centre

ಜೈಪುರ (ರಾಜಸ್ಥಾನ) : ರಾಜಸ್ಥಾನದಲ್ಲಿ ಕಾಂಗ್ರೆಸ್ ತನ್ನ ಅಧಿಕಾರ ಉಳಿಸಿಕೊಂಡರೆ, 2024ರಲ್ಲಿ ಕೇಂದ್ರದಲ್ಲಿಯೂ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಭಾರತೀಯ ಜನತಾ ಪಕ್ಷವು (ಬಿಜೆಪಿ) ಕಾಂಗ್ರೆಸ್​ನ ಯೋಜನೆಗಳನ್ನು ನಕಲು ಮಾಡುತ್ತಿದೆ ಎಂದು ಆರೋಪಿಸಿದ ಖರ್ಗೆ, ಈ ರೀತಿ ಮಾಡುವ ಮೂಲಕ ಕೇಸರಿ ಪಕ್ಷವು ಕಾಪಿರೈಟ್ ಪಡೆಯಲು ಬಯಸುತ್ತಿದೆ, ಆದರೆ ಜನ ಅದಕ್ಕೆ ಯಾವುದೇ ಕಾಪಿರೈಟ್​ ನೀಡುವುದಿಲ್ಲ ಎಂದು ಹೇಳಿದರು.

ಬರಾನ್ ಜಿಲ್ಲೆಯಲ್ಲಿ ಪೂರ್ವ ರಾಜಸ್ಥಾನ ಕಾಲುವೆ ಯೋಜನೆ (ಇಆರ್​ಸಿಪಿ)ಯ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ತಮ್ಮ ಇತ್ತೀಚಿನ ಭಾಷಣಗಳಲ್ಲಿ ಕೆಂಪು ಡೈರಿ ಬಗ್ಗೆ ಮಾತನಾಡಿದ್ದಾರೆ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಸರ್ಕಾರದ ಹಣಕಾಸು ಅಕ್ರಮಗಳ ಬಗ್ಗೆ ಇದರಲ್ಲಿ ಲೆಕ್ಕವಿದೆ ಎಂದು ಅವರು ಹೇಳಿದ್ದಾರೆ. ಆದರೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅದೇ ರೆಡ್ ಡೈರಿಯಲ್ಲಿ ಬರೆಯಲಾಗಿದೆ ಎಂದು ಖರ್ಗೆ ಲೇವಡಿ ಮಾಡಿದರು.

ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 2024 ರಲ್ಲಿ ಪಕ್ಷವು ಕೇಂದ್ರದಲ್ಲಿಯೂ ಅಧಿಕಾರಕ್ಕೆ ಬರಲಿದೆ ಎಂದು ಖರ್ಗೆ ಪ್ರತಿಪಾದಿಸಿದರು. 2019 ರ ಲೋಕಸಭಾ ಚುನಾವಣೆಯಲ್ಲಿ ಜನ ರಾಜಸ್ಥಾನದಿಂದ 25 ಬಿಜೆಪಿ ಸಂಸದರನ್ನು ಆಯ್ಕೆ ಮಾಡಿದ್ದರು. ಆದರೆ ಈ ಸಂಸದರಿಗೆ ಕೇಂದ್ರದಿಂದ ಅನುದಾನ ಅಥವಾ ನೀರು ಯಾವುದನ್ನೂ ತರಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಪ್ರಧಾನಿ ಮತ್ತು ರಾಜಸ್ಥಾನದ ಬಿಜೆಪಿ ಸಂಸದರು ರಾಜ್ಯದ ಜನರಿಗೆ ದ್ರೋಹ ಬಗೆದಿದ್ದಾರೆ ಎಂದು ಅವರು ಆರೋಪಿಸಿದರು.

ರಾಷ್ಟ್ರವ್ಯಾಪಿ ಜಾತಿ ಜನಗಣತಿ ನಡೆಸಬೇಕೆಂಬ ಕಾಂಗ್ರೆಸ್ ಬೇಡಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಈ ಪ್ರಕ್ರಿಯೆಯ ಮೂಲಕ ನಾವು ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮೋದಿ ಆರೋಪಿಸಿದ್ದಾರೆ. ಆದರೆ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಜನರನ್ನು ವಿಭಜಿಸುವುದು ಬಿಜೆಪಿಯ ಕೆಲಸ ಎಂದು ಅವರು ಆರೋಪಿಸಿದರು.

ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವಂತೆ ಖರ್ಗೆ ಜನತೆಗೆ ಕೇಳಿಕೊಂಡರು. ಗೆಹ್ಲೋಟ್ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಎತ್ತಿ ತೋರಿಸಿದ ಅವರು, ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರ್ಕಾರ ಬಡವರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರವು 16,000 ಕೋಟಿ ರೂ.ಗಳ ಕೃಷಿ ಸಾಲ ಮನ್ನಾ ಮಾಡಿದೆ ಮತ್ತು 25 ಲಕ್ಷ ರೂ.ಗಳ ವಿಮಾ ರಕ್ಷಣೆಯೊಂದಿಗೆ ಚಿರಂಜೀವಿ ಆರೋಗ್ಯ ವಿಮಾ ಯೋಜನೆಯಂತಹ ಯೋಜನೆಗಳನ್ನು ಪರಿಚಯಿಸಿದೆ ಎಂದು ಖರ್ಗೆ ಹೇಳಿದರು.

ಇದನ್ನೂ ಓದಿ: 'ಬಿಲ್ಡರ್​ಗೆ ಸರ್ಕಾರಿ ಜಮೀನು ನೀಡಿದ್ದರು ದಾದಾ' ; ರಾಜಕೀಯ ಕೋಲಾಹಲ ಸೃಷ್ಟಿಸಿದ 'ಮೇಡಂ ಕಮಿಷನರ್'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.