ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಲ್ಲಿ (ಇಗ್ನೋ) ಖಾಲಿ ಇರುವ 200 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕಿರಿಯ ಸಹಾಯಕರು ಮತ್ತು ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮಕ್ಕೆ ಮುಂದಾಗಲಾಗಿದೆ. ಪಿಯುಸಿ ಆಗಿರುವ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕಿರಿಯ ಸಹಾಯಕ ಮತ್ತು ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಕ್ರಮಕ್ಕೆ ಮುಂದಾಗಲಾಗಿದೆ. ಒಟ್ಟು 200 ಹುದ್ದೆಗಳು ಖಾಲಿ ಇವೆ.
ವೇತನ: ಈ ಹುದ್ದೆಗೆ ಮಾಸಿಕ 19900 ರಿಂದ 63200 ರೂ. ಮಾಸಿಕ ವೇತನ ನಿಗದಿಸಲಾಗಿದೆ.
ಶೈಕ್ಷಣಿಕ ಅರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪಿಯುಸಿ ಅಥವಾ ಅದಕ್ಕೆ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ಟೈಪಿಂಗ್ ಜ್ಞಾನ ಇದ್ದು, ಈ ಸಂಬಂಧ ನಡೆಸುವ ಬೋರ್ಡ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿದ್ದು, ಗರಿಷ್ಠ 27 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ. ಜಾ, ಪ.ಪಂ ಅಭ್ಯರ್ಥಿಗಳಿಗೆ 10 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ವಿಧಾನ: ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸೂಕ್ತವಾಗಿ ಪರಿಶೀಲಿಸಿ ಭರ್ತಿ ಮಾಡಬೇಕು. ಪ, ಜಾ ಮತ್ತು ಪ. ಪಂ, ಮಹಿಳಾ ಅಭ್ಯರ್ಥಿಗಳಿಗೆ 600 ರೂ ಅರ್ಜಿ ಶುಲ್ಕ ಮತ್ತು ಒಬಿಸಿ, ಸಾಮಾನ್ಯ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ. ವಿಕಲ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಟೈಪಿಂಗ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಮಾರ್ಚ್ 22ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಎಪ್ರಿಲ್ 20 ಆಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿ ಪಡೆಯಲು ಅಭ್ಯರ್ಥಿಗಳು ignou.ac.in ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು.
ಇದನ್ನೂ ಓದಿ: ಅರಣ್ಯ ಇಲಾಖೆಯಲ್ಲಿದೆ ನೌಕರಿ! ತಿಂಗಳಿಗೆ ₹18 ರಿಂದ 32 ಸಾವಿರ ವೇತನ: ಈ ಅರ್ಹತೆ ಇದ್ದರೆ ಅರ್ಜಿ ಹಾಕಿ