ವಾರಣಾಸಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಎರಡು ತಿಂಗಳ ಹಿಂದೆ ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಬಂಧಿತರನ್ನು ಕುನಾಲ್ ಪಾಂಡೆ, ಆನಂದ್ ಅಲಿಯಾಸ್ ಅಭಿಷೇಕ್ ಚೌಹಾಣ್ ಮತ್ತು ಸಕ್ಷಮ್ ಪಟೇಲ್ ಎಂದು ಗುರುತಿಸಲಾಗಿದೆ.
ನವೆಂಬರ್ 1ರ ರಾತ್ರಿ ಐಐಟಿ-ಬಿಹೆಚ್ಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು. ಅಂದು ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ಹಾಸ್ಟೆಲ್‌ನಿಂದ ಹೊರಗೆ ಹೋಗಿದ್ದಳು. ನಂತರ ಸ್ನೇಹಿತನ ಜೊತೆ ಬರುತ್ತಿದ್ದಾಗ ಮಧ್ಯರಾತ್ರಿ ಬೈಕ್ನಲ್ಲಿ ಬಂದ ಮೂವರು ಆಕೆಯನ್ನು ಬಲವಂತವಾಗಿ ಎಳೆದೊಯ್ದು ಕಿರುಕುಳ ನೀಡಿದ್ದರು. ಅಲ್ಲದೇ, ಆಕೆಯನ್ನು ವಿವಸ್ತ್ರಗೊಳಿಸಿ ವಿಡಿಯೋ ಮಾಡಿ ಫೋಟೋ ತೆಗೆದಿದ್ದರು. ಸುಮಾರು 15 ನಿಮಿಷಗಳ ನಂತರ ತನ್ನನ್ನು ಬಿಡಬೇಕಾದರೆ, ಫೋನ್ ನಂಬರ್ ತೆಗೆದುಕೊಂಡಿದ್ದರು ಎಂದು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ಆರೋಪಿಗಳ ಕೃತ್ಯದಿಂದ ಸ್ನೇಹಿತ ಹೆದರಿ ಅಲ್ಲಿಂದ ಓಡಿಹೋಗಿದ್ದ. ಅಲ್ಲದೇ, ಕೂಗಿದರೆ ಕೊಲೆ ಮಾಡುವುದಾಗಿ ಆರೋಪಿಗಳು ನನಗೆ ಬೆದರಿಕೆ ಹಾಕಿದ್ದರು ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದಳು.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಇಲ್ಲಿನ ಲಂಕಾ ಪೊಲೀಸ್ ಪೊಲೀಸರು ಐಪಿಸಿಯ ಸೆಕ್ಷನ್ 354ರಡಿ ದೌರ್ಜನ್ಯ ಪ್ರಕರಣದ ಜೊತೆಗೆ ಸಾಮೂಹಿಕ ಅತ್ಯಾಚಾರ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಮತ್ತೊಂದೆಡೆ, ಕ್ಯಾಂಪಸ್ನಲ್ಲಿ ಈ ಘಟನೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗಳನ್ನು ನಡೆಸಿದ್ದರು.
ಇದೀಗ ಎರಡು ತಿಂಗಳ ಬಳಿಕ ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೇ ವೇಳೆ, ಬಂಧಿತರು ಬಿಜೆಪಿ ಕಾರ್ಯಕರ್ತರಾಗಿದ್ದಾರೆ ಎಂದು ಸಮಾಜವಾದಿ ಪಕ್ಷದ ನಾಯಕ, ಮಾಜಿ ಸಿಎಂ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
-
ये हैं भाजपा के दिग्गज नेताओं की छत्रछाया में सरेआम पनपते और घूमते भाजपाइयों की वो नयी फसल, जिनकी ‘तथाकथित ज़ीरो टॉलरेंस सरकार’ में दिखावटी तलाश जारी है।
— Akhilesh Yadav (@yadavakhilesh) December 31, 2023 " class="align-text-top noRightClick twitterSection" data="
सूचनार्थ : ये भाजपा के सर्वोच्च नेताओं से अभयदान प्राप्त वो भाजपाई हैं जिन पर बनारस हिंदू यूनिवर्सिटी (बीएचयू) में एक छात्रा… pic.twitter.com/2wV7EtnsPr
">ये हैं भाजपा के दिग्गज नेताओं की छत्रछाया में सरेआम पनपते और घूमते भाजपाइयों की वो नयी फसल, जिनकी ‘तथाकथित ज़ीरो टॉलरेंस सरकार’ में दिखावटी तलाश जारी है।
— Akhilesh Yadav (@yadavakhilesh) December 31, 2023
सूचनार्थ : ये भाजपा के सर्वोच्च नेताओं से अभयदान प्राप्त वो भाजपाई हैं जिन पर बनारस हिंदू यूनिवर्सिटी (बीएचयू) में एक छात्रा… pic.twitter.com/2wV7EtnsPrये हैं भाजपा के दिग्गज नेताओं की छत्रछाया में सरेआम पनपते और घूमते भाजपाइयों की वो नयी फसल, जिनकी ‘तथाकथित ज़ीरो टॉलरेंस सरकार’ में दिखावटी तलाश जारी है।
— Akhilesh Yadav (@yadavakhilesh) December 31, 2023
सूचनार्थ : ये भाजपा के सर्वोच्च नेताओं से अभयदान प्राप्त वो भाजपाई हैं जिन पर बनारस हिंदू यूनिवर्सिटी (बीएचयू) में एक छात्रा… pic.twitter.com/2wV7EtnsPr
''ಶೂನ್ಯ ಸಹಿಷ್ಣುತೆಯ ಸರ್ಕಾರ' ಎಂದು ಕರೆಯಲ್ಪಡುವ ಬಿಜೆಪಿಯಲ್ಲಿ ಆಡಂಬರದ ಹುಡುಕಾಟ ನಡೆಯುತ್ತಿರುವ ಬಿಜೆಪಿಯ ಹಿರಿಯ ನಾಯಕರ ಆಶ್ರಯದಲ್ಲಿ ಬಹಿರಂಗವಾಗಿ ಅರಳುತ್ತಿರುವ ಮತ್ತು ತಿರುಗುತ್ತಿರುವ ಬಿಜೆಪಿ ಕಾರ್ಯಕರ್ತರ ಹೊಸ ಬೆಳೆ ಇದು. ನಿಮ್ಮ ಮಾಹಿತಿಗಾಗಿ: ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ (ಬಿಎಚ್‌ಯು) ವಿದ್ಯಾರ್ಥಿಯೊಂದಿಗೆ ಅಸಭ್ಯತೆಯ ಮಿತಿ ಮೀರಿದ ಆರೋಪ ಹೊತ್ತಿರುವ ಬಿಜೆಪಿಯ ಉನ್ನತ ನಾಯಕರಿಂದ ರಕ್ಷಣೆ ಪಡೆದ ಬಿಜೆಪಿ ಕಾರ್ಯಕರ್ತರು ಇವರು. ಪ್ರಶ್ನೆ ಎಂದರೆ: ಮಹಿಳೆಯರ ಘನತೆಯ ಜತೆ ಚೆಲ್ಲಾಟವಾಡುವ ಬಿಜೆಪಿ ನಾಯಕರಿಗೆ ಮುಕ್ತಿ ಸಿಗುತ್ತಾ?'' ಎಂದು ಅಖಿಲೇಶ್ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಬಿಎಚ್‌ಯು ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ: ಕ್ಯಾಂಪಸ್ನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ