ETV Bharat / bharat

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಐಐಟಿ ವಿದ್ಯಾರ್ಥಿ ಬಂಧನ - ಗುವಾಹಾಟಿಯ ಭಾರತೀಯ ತಂತ್ರಜ್ಞಾನ ಸಂಸ್ಥೆ

ಮಾರ್ಚ್ 28 ರ ರಾತ್ರಿ ಹೋಳಿ ಆಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಆರೋಪಿ ವಿದ್ಯಾರ್ಥಿ, ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

IIT-Guwahati student arrested for allegedly raping student on campus
ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಐಐಟಿ ವಿದ್ಯಾರ್ಥಿ ಬಂಧನ
author img

By

Published : Apr 4, 2021, 11:36 AM IST

ಗುವಾಹಟಿ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಗುವಾಹಟಿಯ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ-ಜಿ) ವಿದ್ಯಾರ್ಥಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಉತ್ಸಬ್ ಕದಮ್ ಬಂಧಿತ ವಿದ್ಯಾರ್ಥಿ. ಆರೋಪಿ ಮುಂಬೈ ಮೂಲದವನಾಗಿದ್ದು ರಸಾಯನಶಾಸ್ತ್ರ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದ ಎನ್ನಲಾಗಿದೆ.

ಮಾರ್ಚ್ 28 ರ ರಾತ್ರಿ ಹೋಳಿ ಆಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಆರೋಪಿ ವಿದ್ಯಾರ್ಥಿ, ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿ ಹಾಸ್ಟೆಲ್ ಕೋಣೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಬಾಲಕಿಯನ್ನು ಜಿಎಂಸಿಎಚ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಬಾಲಕಿಯ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಆರೋಪಿ ವಿದ್ಯಾರ್ಥಿಯ ವಿರುದ್ಧ ಪ್ರಕರಣ (53/21) ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 ರ ಅಡಿಯಲ್ಲಿ ಅಮಿಂಗಾಂವ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹೆಚ್ಚಿನ ತನಿಖೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಗಂಡನ ಅಗಲಿಕೆಯ ವೇದನೆ: ಪುತ್ರಿಯರೊಂದಿಗೆ ಕೆರೆಗೆ ಹಾರಿ ಪ್ರಾಣ ಬಿಟ್ಟಳು ಪತ್ನಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.