ETV Bharat / bharat

ಐಐಟಿ ಕಾನ್ಪುರ: ಒತ್ತಡದಿಂದ ಎಂಟೆಕ್ ವಿದ್ಯಾರ್ಥಿ ಆತ್ಮಹತ್ಯೆ

ಐಐಟಿ (ಕಾನ್ಪುರ) ವಿದ್ಯಾರ್ಥಿಯೊಬ್ಬರು ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಂಸ್ಥೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಇದೇ ಮೊದಲಲ್ಲ. ಕೆಲವು ದಿನಗಳ ಹಿಂದೆ ಪಿಹೆಚ್‌ಡಿ ವಿದ್ಯಾರ್ಥಿನಿಯೊಬ್ಬರು ಕೂಡಾ ಒತ್ತಡ ತಾಳಲಾರದೇ ತಮ್ಮ ಜೀವನವನ್ನು ಕೊನೆಗೊಳಿಸಿಕೊಂಡಿದ್ದರು.

ಐಐಟಿ ಕಾನ್ಪುರ
ಐಐಟಿ ಕಾನ್ಪುರ
author img

By ETV Bharat Karnataka Team

Published : Jan 11, 2024, 7:21 PM IST

ಕಾನ್ಪುರ (ಉತ್ತರ ಪ್ರದೇಶ) : ಐಐಟಿ ಕಾನ್ಪುರದಲ್ಲಿ ಬುಧವಾರ ರಾತ್ರಿ ಎಂಟೆಕ್ ವಿದ್ಯಾರ್ಥಿಯೊಬ್ಬರು ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಣೆಯಲ್ಲಿ ಅವರ ಶವ ಪತ್ತೆಯಾಗಿದೆ. ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಫೋರೆನ್ಸಿಕ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯ ಸಂಗ್ರಹಿಸಿದ್ದಾರೆ. ವಾಸ್ತವವಾಗಿ ಕೆಲವು ದಿನಗಳ ಹಿಂದೆ, ಜೈವಿಕ ವಿಜ್ಞಾನ ಮತ್ತು ಜೈವಿಕ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಪಲ್ಲವಿ ಎಂಬುವವರು ಕೂಡಾ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಐಐಟಿ ವಿದ್ಯಾರ್ಥಿಗಳ ಪ್ರಕಾರ, ಮೃತರು ಖಿನ್ನತೆಯ ಸ್ಥಿತಿಯಲ್ಲಿದ್ದರು.

ಆತ್ಯಹತ್ಯೆಗೆ ಶರಣಾದ ಮೀರತ್‌ನ ಲಕ್ಷ್ಮಿ ವಿಹಾರ್ ಕಾರ್ಖೇಡಾ ನಿವಾಸಿ ನೇಮಚಂದ್ ಮೀನಾ ಅವರ ಪುತ್ರ ವಿಕಾಸ್ ಮೀನಾ ಐಐಟಿ ಕಾನ್ಪುರದಲ್ಲಿ ಎರಡನೇ ವರ್ಷದ ಎಂಟೆಕ್ ವಿದ್ಯಾರ್ಥಿಯಾಗಿದ್ದರು ಎಂದು ಕಲ್ಯಾಣಪುರ ಪೊಲೀಸ್ ಠಾಣೆ ಪ್ರಭಾರಿ ಧನಂಜಯ್ ಪಾಂಡೆ ಅವರು ತಿಳಿಸಿದ್ದಾರೆ.

ಬುಧವಾರ ರಾತ್ರಿ 10 ಗಂಟೆಗೆ ವಿಕಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಕ್ಯಾಂಪಸ್‌ನಲ್ಲಿನ ವಾತಾವರಣದ ಮೇಲೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆಡಳಿತ ಅಧಿಕಾರಿಗಳು ಯಾವಾಗಲೂ ಐಐಟಿ ಕಾನ್ಪುರವನ್ನು ವಿದ್ಯಾರ್ಥಿ ಸ್ನೇಹಿ ಎಂದು ಬಣ್ಣಿಸಿದ್ದಾರೆ. ವಿದ್ಯಾರ್ಥಿಗಳು ಒತ್ತಡದಿಂದ ಮುಕ್ತರಾಗಿರುತ್ತಾರೆ ಎಂದೂ ಹೇಳಲಾಗುತ್ತಿದೆ. ಆದರೆ ಒಂದು ತಿಂಗಳಿನಲ್ಲಿ ಇಬ್ಬರು ಹಿರಿಯ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಈ ಮಾತನ್ನು ಸುಳ್ಳಾಗಿಸಿದೆ. ವಾಸ್ತವವಾಗಿ ಇಂತಹ ವಿಪರೀತ ಕ್ರಮಗಳು ಆಡಳಿತವನ್ನು ಇಕ್ಕಟ್ಟಿಗೆ ಸಿಲುಕಿಸಿವೆ. ಕ್ಯಾಂಪಸ್‌ನಲ್ಲಿ ಶಾಂತಿ ಇದೆಯೇ ಅಥವಾ ಇಲ್ಲವೇ ಎಂದು ವಿದ್ಯಾರ್ಥಿಗಳು ಆಶ್ಚರ್ಯ ಪಡುವಂತಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ: ನೀವು ಆತ್ಮಹತ್ಯಾ ಆಲೋಚನೆಗಳನ್ನು ಹೊಂದಿದ್ದರೆ, ಅಥವಾ ಸ್ನೇಹಿತರ ಬಗ್ಗೆ ಚಿಂತೆ ಮಾಡುತ್ತಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯ ಇದ್ದರೆ, ನಿಮ್ಮ ಸಮಸ್ಯೆ ಕೇಳಲು ಯಾರಾದರೂ ಒಬ್ಬರು ಇರುತ್ತಾರೆ. ಇದಕ್ಕೆ ಸ್ನೇಹ ಫೌಂಡೇಶನ್ - 04424640050 (24x7 ಲಭ್ಯವಿದೆ) ಅಥವಾ iCall, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ನ ಸಹಾಯವಾಣಿ - 9152987821 ಗೆ ಕರೆ ಮಾಡಿ. ಇದು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 10 ರವರೆಗೆ ಲಭ್ಯ ಇರಲಿದೆ.

ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ( ಪ್ರತ್ಯೇಕ ಪ್ರಕರಣ): ಪ್ರಥಮ ಪಿಯುಸಿಯಲ್ಲಿ ಎರಡು ಬಾರಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಯ್ಯನಪಾಳ್ಯದಲ್ಲಿ (ಜುಲೈ -6-23) ನಡೆದಿತ್ತು. ಚಾರ್ಲಿ (17) ಆತ್ಮಹತ್ಯೆಗೆ ಶರಣಾದ ಯುವಕ ಎಂಬುದಾಗಿ ತಿಳಿದು ಬಂದಿತ್ತು.

ಇದನ್ನೂ ಓದಿ: ಪ್ರಥಮ ಪಿಯುಸಿಯಲ್ಲಿ ಎರಡು ಬಾರಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.