ETV Bharat / bharat

ಓದುವ ವಯಸ್ಸಲ್ಲೇ ಅಮ್ಮನಾದ ಬಾಲಕಿ: ಶಾಲೆ ಶೌಚಾಲಯದಲ್ಲೇ ಮಗು ಹೆತ್ತು ಪೊದೆಗೆಸೆದಳು! - Etv bharat kannada

ವಿದ್ಯಾರ್ಥಿನಿಯೋರ್ವಳು ಶಾಲಾ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

student gave birth to child
student gave birth to child
author img

By

Published : Sep 6, 2022, 12:26 PM IST

ಕಡಲೂರು (ತಮಿಳುನಾಡು): 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವಿದ್ಯಾರ್ಥಿನಿಯೋರ್ವಳು ಶಾಲಾ ಶೌಚಾಲಯದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಮಿಳುನಾಡಿನ ಕಡಲೂರು ಸಮೀಪದ ಭುವನಗಿರಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ಸಂಪೂರ್ಣ ವಿವರ: ಭುವನಗಿರಿಯಲ್ಲಿರುವ ಹೈಯರ್​​ ಸೆಕೆಂಡರಿ ಶಾಲೆಯಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ 10ನೇ ತರಗತಿಯ ವಿದ್ಯಾರ್ಥಿ ಹಾಗೂ 11ನೇ ತರಗತಿ ವಿದ್ಯಾರ್ಥಿನಿ ನಡುವೆ ಅಕ್ರಮ ಸಂಬಂಧವಿತ್ತು. ಇಂದು ಬೆಳಗ್ಗೆ ಬಾಲಕಿ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ತದನಂತರ ಅದನ್ನು ಶಾಲೆಯ ಕಾಂಪೌಂಡ್‌ ಪಕ್ಕದ ಪೊದೆಗೆ ಎಸೆದಿದ್ದಾಳೆ. ಇದನ್ನು ನೋಡಿರುವ ಇತರೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರಿಗೆ ಮಾಹಿತಿ ಮುಟ್ಟಿಸಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿ, ಪೊದೆಯಲ್ಲಿ ಎಸೆದು ಹೋದ ವಿದ್ಯಾರ್ಥಿನಿ

ಘಟನಾ ಸ್ಥಳಕ್ಕೆ ಭುವನಗಿರಿ ಇನ್ಸ್​ಪೆಕ್ಟರ್​​ ಸರಸ್ವತಿ ಹಾಗೂ ಸಬ್​ ಇನ್ಸ್​ಪೆಕ್ಟರ್​ ಸಂತೋಷ್​ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶಿಶುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: ಯೂಟ್ಯೂಬ್​ ನೋಡಿ, ಹೆರಿಗೆ ಮಾಡಿಕೊಂಡ 17 ವರ್ಷದ ಶಾಲಾ ವಿದ್ಯಾರ್ಥಿನಿ!

ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಅದೇ ಶಾಲೆಯಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವುದು ಗೊತ್ತಾಗಿದೆ. ಬೆಳಗ್ಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಆಕೆ ಶೌಚಾಲಯಕ್ಕೆ ತೆರಳಿದ್ದಳು. ಬಳಿಕ ಅಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ ಅನ್ನೋದು ತಿಳಿದುಬಂದಿದೆ.

ಬಾಲಕಿಯನ್ನು ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯವೆಸಗಿರುವ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರೂ ವಿದ್ಯಾರ್ಥಿಗಳು ಅಪ್ರಾಪ್ತರಾಗಿರುವ ಕಾರಣ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.