ETV Bharat / bharat

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡುವಂತೆ ಪ್ರಧಾನಿಗೆ ಐಎಂಎ ಪತ್ರ

ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್‌ನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ಪಡೆಯಲು ಅನುಮತಿ ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಐಎಂಎ ಒತ್ತಾಯಿಸಿದೆ.

author img

By

Published : Apr 6, 2021, 1:24 PM IST

ನವದೆಹಲಿ: ದೇಶದಲ್ಲಿ ಕೋವಿಡ್​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆದೇಶ ನೀಡುವಂತೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದೆ.

ಭಾರತ ಇನ್ನೂ ಕೊರೊನಾ ಸಾಂಕ್ರಾಮಿಕವನ್ನು ಎದುರಿಸುತ್ತಿದೆ. ಪ್ರಸ್ತುತ, ನಾವು 45 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಲಸಿಕೆ ಹಾಕುತ್ತಿದ್ದೇವೆ. ಆದರೆ ದೇಶದಲ್ಲಿ ಬೀಸುತ್ತಿರುವ​ ಎರಡನೇ ಕೋವಿಡ್ ಅಲೆ ವೇಗವಾಗಿ ಹರಡುವುದನ್ನು ಗಮನದಲ್ಲಿಟ್ಟುಕೊಂಡು ವ್ಯಾಕ್ಸಿನೇಷನ್ ತಂತ್ರವನ್ನು ಸಜ್ಜುಗೊಳಿಸುವ ಅಗತ್ಯವಿದೆ. ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್‌ನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ಪಡೆಯಲು ಅನುಮತಿ ನೀಡುವಂತೆ ಒತ್ತಾಯಿಸುತ್ತಿರುವುದಾಗಿ ಐಎಂಎ ಪತ್ರದಲ್ಲಿ ತಿಳಿಸಿದೆ.

ಇದನ್ನೂ ಓದಿ: ದೇಶದಲ್ಲಿ ನಿಲ್ಲದ ಕೋವಿಡ್ ಅಟ್ಟಹಾಸ: 24 ಗಂಟೆಗಳಲ್ಲಿ 96 ಸಾವಿರ ಪ್ರಕರಣ ಪತ್ತೆ

ಖಾಸಗಿ ಆಸ್ಪತ್ರೆಗಳ ಜೊತೆಯಲ್ಲಿ ಖಾಸಗಿ ಚಿಕಿತ್ಸಾಲಯಗಳಲ್ಲಿಯೂ ಫ್ಯಾಮಿಲಿ ಡಾಕ್ಟರ್​ಗಳ ಸಹಾಯದೊಂದಿಗೆ ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆಸುವಂತೆ ಕೂಡ ಐಎಂಎ ಆಗ್ರಹಿಸಿದೆ. ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಿಸಲು ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿಯಲ್ಲಿ ಉತ್ಪನ್ನಗಳನ್ನು ಸ್ವೀಕರಿಸಲು ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಬೇಕು. ಹಾಗೆಯೇ ಸಿನಿಮಾ, ಸಾಂಸ್ಕೃತಿಕ, ಕ್ರೀಡಾ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಸೇರಿದಂತೆ ಅನಿವಾರ್ಯವಲ್ಲದ ಕ್ಷೇತ್ರಗಳಿಗೆ ಸೀಮಿತ ಅವಧಿಯ ಲಾಕ್‌ಡೌನ್ ಅನ್ನು ಸಹ ಜಾರಿಗೆ ತರಬೇಕು ಎಂದು ಐಎಂಎ ಹೇಳಿದೆ.

ಭಾರತದಲ್ಲಿ 2ನೇ ಹಂತದ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದೆ. ಆರಂಭದಲ್ಲಿ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರಿಗೆ ಲಸಿಕೆ ನೀಡಲಾಯಿತು. ನಂತರ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ನೀಡಲಾಗಿತ್ತು. ಏಪ್ರಿಲ್​ 1ರಿಂದ 45 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್​ ಪಡೆಯಲು ಅವಕಾಶ ನೀಡಲಾಗಿದೆ. ಜನವರಿ 16 ರಿಂದ ಈವರೆಗೆ ಒಟ್ಟು 8,31,10,926 ಮಂದಿ ಲಸಿಕೆ ಪಡೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.