ETV Bharat / bharat

ಮುಂದಿನ 4 ದಿನಗಳಲ್ಲಿ ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ

author img

By

Published : Nov 4, 2020, 4:44 PM IST

ದಕ್ಷಿಣ ಭಾರತದ ಹಲವೆಡೆ ಮುಂದಿನ ನಾಲ್ಕು ದಿನಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

imd
ಭಾರತೀಯ ಹವಾಮಾನ ಇಲಾಖೆ

ನವದೆಹಲಿ: ಮುಂದಿನ ನಾಲ್ಕು ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕೇರಳ, ಮಾಹೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಲಕ್ಷದ್ವೀಪದ ಕೆಲವು ಪ್ರದೇಶಗಳಲ್ಲಿ ನವೆಂಬರ್ 4 ಮತ್ತು 8ರ ನಡುವೆ ಮಳೆಯಾಗಬಹುದು ಹವಾಮಾನ ಇಲಾಖೆ ಹೇಳಿದ್ದು, ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ.

  • i) Scattered to fairly widespread rainfall very likely over Tamilnadu, Puducherry, Kerala, Mahe, South Interior Karnataka and Lakshadweep area during next 5 days; Isolated/scattered rainfall over Coastal Karnataka, Andhra Pradesh and Telangana during next 3-4 days. @ndmaindia

    — India Met. Dept. (@Indiametdept) November 4, 2020 " class="align-text-top noRightClick twitterSection" data=" ">

ಶ್ರೀಲಂಕಾ ಕರಾವಳಿಯ ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ಚಂಡಮಾರುತವೊಂದು ಮುಂದುವರೆದಿದ್ದು, ಮತ್ತೊಂದೆಡೆ ಅಗ್ನೇಯ ಅರೇಬಿಯನ್ ಸಮುದ್ರದಿಂದ ಕರ್ನಾಟಕ ಕರಾವಳಿಗೆ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂದಿನ 5 ದಿನಗಳಲ್ಲಿ ಉತ್ತರ, ಪಶ್ಚಿಮ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಮತ್ತು ಪೂರ್ವ ಭಾರತದ ಕೆಲವು ಭಾಗಗಳಲ್ಲಿ ಶುಷ್ಕ ಹವಾಮಾನ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಐಎಂಡಿ ಟ್ವೀಟ್ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.