ETV Bharat / bharat

ಶೇ.10 ಕ್ಕಿಂತ ಹೆಚ್ಚು ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳಿ: ಕೇಂದ್ರದ ಸೂಚನೆ

ಕೋವಿಡ್ ಎರಡನೇ ಅಲೆಯ ಹೊಡೆತದಿಂದ ದೇಶ ಸ್ವಲ್ಪ ಚೇತರಿಸಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಮೂರನೇ ಅಲೆ ಆವರಿಸಿಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಹಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗಿದೆ. ಮಹಾಮಾರಿ ಕಾಣಿಸಿಕೊಳ್ಳುವ ಮೊದಲೇ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚಿಸಿದೆ.

Covid 3rd wave
ಕೋವಿಡ್ ಮೂರನೇ ಅಲೆ
author img

By

Published : Aug 1, 2021, 9:01 AM IST

ನವದೆಹಲಿ: ಪ್ರಸ್ತುತ ಶೇ.10 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿರುವ ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಅಂತಹ ಜಿಲ್ಲೆಗಳಲ್ಲಿ ಜನಸಂದಣಿ ತಡೆಯಲು ಪರಿಣಾಮಕಾರಿ ಕ್ರಮಗಳನ್ನು ರಾಜ್ಯ ಸರ್ಕಾರಗಳು ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

ಕೋವಿಡ್ ಪ್ರಕರಣಗಳ ಏರಿಕೆ ಮತ್ತು ಪಾಸಿಟಿವಿಟಿ ದರ ಹೆಚ್ಚಿರುವ 10 ರಾಜ್ಯಗಳ ಪರಿಸ್ಥಿತಿಯನ್ನು ಗಮನಿಸುತ್ತಿದ್ದೇವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ. ಶೇ. 10 ಹೆಚ್ಚು ಪಾಸಿಟಿವ್ ದರ ಇರುವ ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸುವಂತೆ ಅವರು ತಿಳಿಸಿದರು.

ಪಾಸಿಟಿವಿಟಿ ಪ್ರಮಾಣ ಅಧಿಕ ಇರುವ ಜಿಲ್ಲೆಗಳಲ್ಲಿ ಜನರು ಗುಂಪು ಸೇರುವುದು, ಪರಸ್ಪರ ಅಂತರ ಪಾಲಿಸದೆ ಬೆರೆಯುವುದು ಮತ್ತು ಮಾಸ್ಕ್ ಧರಿಸದೇ ಇರುವ ಬಗ್ಗೆ ನಿಗಾ ಇಡಬೇಕು. ಅಲ್ಲದೇ, ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಬೇಕಾಗಿದೆ. ಈ ಹಂತದಲ್ಲಿ ನಾವು ನಿರ್ಲಕ್ಷ್ಯ ಮಾಡಿದರೆ, ಮುಂದೆ ಅಪಾಯಕ್ಕೆ ಕಾರಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಸೆಪ್ಟೆಂಬರ್​​ನಲ್ಲಿ ಸ್ಪುಟ್ನಿಕ್ ವಿ ಲಸಿಕೆ ಭಾರತದಲ್ಲಿ ಪೂರ್ಣ ಬಳಕೆಗೆ ಸಿದ್ಧ : ಆರ್​​ಡಿಐಎಫ್

ಕೇರಳ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಒಡಿಶಾ, ಅಸ್ಸಾಂ, ಮಿಜೋರಾಂ, ಮೇಘಾಲಯ, ಆಂಧ್ರ ಪ್ರದೇಶ ಮತ್ತು ಮಣಿಪುರ ಸೇರಿ ಒಟ್ಟು 10 ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದೆ. ಪಾಸಿಟಿವಿಟಿ ಪ್ರಮಾಣ ಹೆಚ್ಚು ಇರುವ ಜಿಲ್ಲೆಗಳಲ್ಲಿ ಲಸಿಕೆ ನೀಡುವುದನ್ನು ಹೆಚ್ಚಿಸುವಂತೆ ಆರೋಗ್ಯ ಸಚಿವಾಲಯ ಸೂಚಿಸಿದೆ.

ಕರ್ನಾಟಕದ ಕೋವಿಡ್‌ ವರದಿ

ರಾಜ್ಯದಲ್ಲಿ ಶನಿವಾರ 1,38,532 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. 1,987 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,05,124ಕ್ಕೆ ಏರಿಕೆ ಕಂಡಿದೆ.

ದೇಶದ ಕೋವಿಡ್‌ ಸ್ಥಿತಿಗತಿ

ದೇಶದಲ್ಲಿ ಶನಿವಾರ ಹೊಸದಾಗಿ 41,649 ಜನರಿಗೆ ಕೋವಿಡ್​ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 3,16,13,993ಕ್ಕೆ ಏರಿದೆ. ಶುಕ್ರವಾರದಿಂದ ಶನಿವಾರದ ನಡುವೆ 24 ಗಂಟೆಗಳಲ್ಲಿ 37,291 ಜನರು ಕೊರೊನಾದಿಂದ ಚೇತರಿಕೆಯಾಗಿದ್ದು, ಈವರೆಗೆ 3,07,81,263 ಜನರು ಗುಣಮುಖರಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.