ETV Bharat / bharat

ಪ್ರಜಾಪ್ರಭುತ್ವದಲ್ಲಿ ಸೋಲು, ಗೆಲುವು ಶಾಶ್ವತವಲ್ಲ: ಕಾಂಗ್ರೆಸ್​ ಅಧ್ಯಕ್ಷ ಖರ್ಗೆ - ಭಾರತ್ ಜೋಡೋ ಯಾತ್ರೆ

ಪ್ರಜಾಪ್ರಭುತ್ವದಲ್ಲಿ ಸೋಲಾಗಲಿ, ಗೆಲುವಾಗಲಿ ಶಾಶ್ವತವಲ್ಲ. ನಮ್ಮ ಲೋಪಗಳನ್ನು ಸರಿಪಡಿಸಿಕೊಂಡು ಹೋರಾಟ ಮಾಡುತ್ತೇವೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

in-a-democracy-wins-and-losses-happen-says-congress-president-kharge
ಪ್ರಜಾಪ್ರಭುತ್ವದಲ್ಲಿ ಸೋಲಾಗಲಿ, ಗೆಲುವಾಗಲಿ ಶಾಶ್ವತವಲ್ಲ: ಕಾಂಗ್ರೆಸ್​ ಅಧ್ಯಕ್ಷ ಖರ್ಗೆ
author img

By

Published : Dec 8, 2022, 6:32 PM IST

ನವ ದೆಹಲಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಇದು ನಮ್ಮ ಸೈದ್ಧಾಂತಿಕ ಹೋರಾಟ. ನಾವು ನಮ್ಮ ನ್ಯೂನತೆಗಳನ್ನು ಸರಿಪಡಿಸಿಕೊಂಡು ಹೋರಾಟ ಮುಂದುವರಿಸುತ್ತೇವೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಗುಜರಾತ್​ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಖರ್ಗೆ, ಗುಜರಾತ್​ನಲ್ಲಿ ಪಕ್ಷದ ಸೋಲನ್ನು ಸ್ವೀಕಾರ ಮಾಡುತ್ತೇವೆ. ಗೆದ್ದವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಪ್ರಜಾಪ್ರಭುತ್ವದಲ್ಲಿ ಸೋಲಾಗಲಿ, ಗೆಲುವಾಗಲಿ ಶಾಶ್ವತವಲ್ಲ. ನಮ್ಮ ಲೋಪಗಳನ್ನು ಸರಿಪಡಿಸಿಕೊಂಡು ಹೋರಾಟ ಮಾಡುತ್ತೇವೆ ಎಂದರು.

ಹಿಮಾಚಲ ಪ್ರದೇಶದಲ್ಲಿ ನಾವು ಗೆದ್ದಿದ್ದೇವೆ. ಈ ಫಲಿತಾಂಶಕ್ಕೆ ಕಾರಣವಾದ ಜನತೆ, ನಮ್ಮ ಕಾರ್ಯಕರ್ತರು ಮತ್ತು ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಜೊತೆಗೆ ಪ್ರಿಯಾಂಕಾ ಗಾಂಧಿ ಅವರಿಗೂ ಧನ್ಯವಾದ ತಿಳಿಸುತ್ತೇನೆ. ರಾಹುಲ್​ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಕೂಡ ಈ ಫಲಿತಾಂಶಕ್ಕೆ ಕಾರಣವಾಗಿದೆ ಎಂದು ಖರ್ಗೆ ತಿಳಿಸಿದ್ದಾರೆ.

ಇದೇ ವೇಳೆ ನಮ್ಮ ವೀಕ್ಷಕರು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದಾರೆ. ಯಾವಾಗ ರಾಜ್ಯಪಾಲರನ್ನು ಭೇಟಿಯಾಗಬೇಕು ಮತ್ತು ಕಾಂಗ್ರೆಸ್ ಶಾಸಕರ ಸಭೆಯನ್ನು ಕರೆಯಬೇಕೆಂದು ನಿರ್ಧರಿಸುತ್ತಾರೆ ಎಂದೂ ಮಾಹಿತಿ ನೀಡಿದರು.

ಇದನ್ನೂ ಓದಿ: ಗುಜರಾತ್, ಹಿಮಾಚಲ ಫಲಿತಾಂಶ: ಜನಶಕ್ತಿಗೆ ತಲೆಬಾಗುತ್ತೇನೆ- ಮೋದಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.