ಶ್ರೀನಗರ(ಜಮ್ಮು-ಕಾಶ್ಮೀರ): ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಸಡಗರ-ಸಂಭ್ರಮದಿಂದ ಆಚರಣೆ ಮಾಡಲಾಗಿದ್ದು, ಇದರ ಮಧ್ಯೆ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿರುವ ಲಾಲ್ಚೌಕ್ ಪ್ರದೇಶದ ಗಡಿಯಾರ ಗೋಪುರದಲ್ಲಿ ಸ್ವತಂತ್ರ ಭಾರತದ ನಂತರ ಇದೇ ಮೊದಲ ಸಲ ತ್ರಿವರ್ಣ ಧ್ವಜ ಹಾರಿದೆ.
73ನೇ ಗಣರಾಜ್ಯೋತ್ಸವದ ಅಂಗವಾಗಿ ಲಾಲ್ ಚೌಕ್ ಪ್ರದೇಶದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಕಾಶ್ಮೀರಿ ಸ್ಥಳೀಯರು ಅಲ್ಲಿನ ಆಡಳಿತದೊಂದಿಗೆ ಬೃಹತ್ ರಾಷ್ಟ್ರಧ್ವಜ ಆರೋಹಣ ಮಾಡಿದರು. ಹೀಗಾಗಿ ಸಾಕಷ್ಟು ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ಕಳೆದ 30 ವರ್ಷಗಳ ಹಿಂದೆ ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರು 30 ವರ್ಷಗಳ ಹಿಂದೆ ಈ ಸ್ಥಳದಲ್ಲಿ ರಾಷ್ಟ್ರಧ್ವಜ ಹಾರಿಸಿದ್ದರು. ಆದರೆ, ಮಿಲಿಟರಿ ಪಡೆಯ ಸರ್ಪಗಾವಲಿನಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ವೇಳೆ ನರೇಂದ್ರ ಮೋದಿ ಸಹ ತೆರಳಿದ್ದರು.
ಇದನ್ನೂ ಓದಿರಿ: ಗರ್ಭಿಣಿಗೆ ಹೆರಿಗೆ ಮಾಡಿಸಲು ವೈದ್ಯರು ಹಿಂದೇಟು.. ರಸ್ತೆಯಲ್ಲೇ ಶಿಶುವಿಗೆ ಜನ್ಮ ನೀಡಿದ ತಾಯಿ!
1992ರಲ್ಲಿ ತಾಕತ್ತು ಇದ್ದರೆ ಲಾಲ್ಚೌಕ್ನಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ಉಗ್ರರು ಚಾಲೆಂಜ್ ಹಾಕಿದ್ದರು. ಇದನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮುರುಳಿ ಮನೋಹರ್ ಜೋಡಿ ಹಾಗೂ ನರೇಂದ್ರ ಮೋದಿ ತ್ರಿವರ್ಣ ಧ್ವಜ ಹಾರಿಸಿದ್ದರು. ಆದರೆ, ಇದೀಗ ಅಧಿಕೃತವಾಗಿ ಸರ್ಕಾರದಿಂದಲೇ ಧ್ವಜಾರೋಹಣ ನಡೆದಿದೆ. ಕಳೆದ ಅನೇಕ ವರ್ಷಗಳಿಂದ ಈ ಸ್ಥಳ ವಿವಾದಾತ್ಮಕವಾಗಿ ಕೂಡಿದ್ದರಿಂದ ಧ್ವಜಾರೋಹಣ ಮಾಡಿರಲಿಲ್ಲ. ಕಳೆದ ವರ್ಷ ಆರ್ಟಿಕಲ್ 370 ರದ್ದುಗೊಂಡ ನಂತರ ತ್ರಿವರ್ಣ ಧ್ವಜ ಹಾರಾಡಿದೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ