ಭುವನೇಶ್ವರ್(ಒಡಿಶಾ): ದೇಶದಲ್ಲಿ ಕೋವಿಡ್ ಮೂರನೇ ಅಲೆ ಭೀತಿ ಸೃಷ್ಟಿಯಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಕೇವಲ 2 ದಿನಗಳಲ್ಲಿ 242 ಮಕ್ಕಳಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿತ್ತು. ಇದರ ಬೆನ್ನಲ್ಲೇ ಇದೀಗ ಒಡಿಶಾದಲ್ಲೂ ಅನೇಕ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೇವಲ ಎರಡು ದಿನಗಳಲ್ಲಿ 242 ಮಕ್ಕಳಲ್ಲಿ ಸೋಂಕು ದೃಢಗೊಂಡಿದ್ದು ಚಿಂತೆಗೀಡು ಮಾಡಿದೆ.
ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಡಿಎಂಇಟಿ ಮುಖ್ಯಸ್ಥ ಸಿಬಿಕೆ ಮೊಹಾಂತಿ, 0-18 ವಯಸ್ಸಿನ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಕಂಡು ಬರುತ್ತಿದೆ. ಸದ್ಯ ದೇಶದಲ್ಲಿ ಶೇ. 12ರಷ್ಟು ಮಕ್ಕಳಲ್ಲಿ ಕೊರೊನಾ ಕಾಣಿಸಿಕೊಂಡಿದೆ ಎಂದಿದ್ದಾರೆ. 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ಇದೀಗ ಹೆಚ್ಚಿನ ಮಕ್ಕಳು ಸೋಂಕಿಗೊಳಗಾಗುತ್ತಿದ್ದಾರೆ. ಅವರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಮೊದಲನೇ ದಿನ 138 ಹಾಗೂ ಎರಡನೇ ದಿನ 104 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದಾಗಿ ತಿಳಿದು ಬಂದಿದ್ದು, ಇವರೆಲ್ಲರೂ 9 ರಿಂದ 18 ವಯಸ್ಸಿನೊಳಗಿನವರು ಎಂದು ಹೇಳಲಾಗಿದೆ.
ಇದನ್ನೂ ಓದಿ: ಕಾಬೂಲ್ ಏರ್‌ಪೋರ್ಟ್‌ನಲ್ಲಿ ಗುಂಡಿನ ದಾಳಿಗೆ ಮೂವರು ಬಲಿ: ಪ್ರಾಣ ರಕ್ಷಿಸಿಕೊಳ್ಳಲು ಅಫ್ಘನ್ನರ ಪರದಾಟ
ಕಳೆದ ಕೆಲ ದಿನಗಳಿಂದ ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಕೆಲವೊಂದು ರಾಜ್ಯಗಳಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವ ಕಾರಣ ಮತ್ತಷ್ಟು ಕಠಿಣ ನಿರ್ಧಾರ ಕೈಗೊಳ್ಳಲಾಗಿದ್ದು, ವ್ಯಾಕ್ಸಿನೇಷನ್ ಹೆಚ್ಚಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 5 ದಿನಗಳಲ್ಲಿ ಬರೋಬ್ಬರಿ 242 ಮಕ್ಕಳಿಗೆ ಕೊವಿಡ್ ಪಾಸಿಟಿವ್ ಕಾಣಿಸಿಕೊಂಡಿತ್ತು. ಆದರೆ ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.