ಗುಜರಾತ್: ಅಹ್ಮದಾಬಾದ್ನ ಸಬರಮತಿಯಲ್ಲಿ ನವೀಕೃತಗೊಂಡಿರುವ ಮೊಟೆರಾದ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಮೈದಾನ ಲೋಕಾರ್ಪಣೆಗೊಂಡಿತು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಶ್ವದ ಅತಿದೊಡ್ಡ ಕ್ರೀಡಾಂಗಣವನ್ನ ಉದ್ಘಾಟಿಸಿದರು. ಗೃಹ ಸಚಿವ ಅಮಿತ್ ಶಾ, ಕ್ರೀಡಾ ಸಚಿವ ಕಿರೆನ್ ರಿಜಿಜು ಮತ್ತು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಸೇರಿದಂತೆ ಇತರ ಪ್ರಮುಖರು ಭಾಗವಹಿಸಿದ್ದಾರೆ.
ಈ ಮೈದಾನದಲ್ಲಿ ಇಂದಿನಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಇದು ಅಹರ್ನಿಶಿ ಟೆಸ್ಟ್ ಪಂದ್ಯವಾಗಿದ್ದು, ಈ ಕ್ರೀಡಾಂಗಣದಲ್ಲಿನ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿದೆ.