ETV Bharat / bharat

ಖರ್ಗೆ ನೇತೃತ್ವದಲ್ಲಿ ಹೊಸ ತಂಡ ರಚನೆ ಹಿನ್ನೆಲೆ.. ರಾಜೀನಾಮೆ ಸಲ್ಲಿಸಿದ ಪದಾಧಿಕಾರಿಗಳು - ಕಾಂಗ್ರೆಸ್ ಕಾರ್ಯಕಾರಿ ಸಮಿತಿ

ಎಲ್ಲ ಸಿಡಬ್ಲ್ಯೂಸಿ ಸದಸ್ಯರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ತಮ್ಮ ರಾಜೀನಾಮೆಯನ್ನು ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ ಎಂದು ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

K.C. Venugopal
ಕೆ.ಸಿ ವೇಣುಗೋಪಾಲ್
author img

By

Published : Oct 26, 2022, 1:19 PM IST

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ಖರ್ಗೆ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗುತ್ತಿದ್ದಂತೆ ಎಲ್ಲ ಸಿಡಬ್ಲ್ಯೂಸಿ ಸದಸ್ಯರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ಹೊಸ ತಂಡವನ್ನು ಆಯ್ಕೆ ಮಾಡಲು ರಾಜೀನಾಮೆ ನೀಡಿದರು ಎಂದು ಅವರು ಟ್ವೀಟ್​ ಮಾಡಿದ್ದಾರೆ.

  • "All the CWC Members, AICC General Secretaries and Incharges have tendered their resignation to Congress President," tweets Congress MP KC Venugopal

    Mallikarjun Kharge today took charge as Congress president pic.twitter.com/9kvAEP8aHb

    — ANI (@ANI) October 26, 2022 " class="align-text-top noRightClick twitterSection" data=" ">

ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ( ಸಿಡಬ್ಲ್ಯೂಸಿ), ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. 12 ಸದಸ್ಯರನ್ನು ಆಯ್ಕೆ ಮಾಡಲು ಸಿಡಬ್ಲ್ಯೂಸಿ ಚುನಾವಣೆ ನಡೆಯುವಾಗ ನೂತನ ಅಧ್ಯಕ್ಷರು ತಮ್ಮ ಹೊಸ ತಂಡವನ್ನು ಘೋಷಿಸುತ್ತಾರೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ: ಪಕ್ಷ ನಿಷ್ಠೆ, ಹೋರಾಟ, ಪ್ರಾಮಾಣಿಕತೆಗೆ ಸಂದ ಗೌರವ

ಇದಕ್ಕೂ ಮುನ್ನ ಖರ್ಗೆ ತಮ್ಮ ಚೊಚ್ಚಲ ಭಾಷಣ ಮಾಡಿದರು. "ಬಾಬಾ ಸಾಹೇಬರ ಸಂವಿಧಾನವನ್ನು ಬದಲಾಯಿಸುವ ಪ್ರಯತ್ನ ನಡೆಯುತ್ತಿದೆ ಅದನ್ನು ಕಾಂಗ್ರೆಸ್ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಜನರಿಗಾಗಿ ಸರ್ಕಾರದ ವಿರುದ್ಧ ಹೋರಾಡುತ್ತದೆ. ಉದಯಪುರ ಘೋಷಣೆಯಂತೆ ಪಕ್ಷದ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಮತ್ತು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ವಿಶೇಷ ಒತ್ತು ನೀಡುವ ಸಾಮಾಜಿಕ ಸಲಹಾ ಸಮಿತಿ ಇರುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

1969ರಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತನಾಗಿ ವೃತ್ತಿ ಜೀವನ ಆರಂಭಿಸಿ ಈಗ ಪಕ್ಷದ ಅಧ್ಯಕ್ಷನಾಗಿದ್ದೇನೆ. ಕಾಂಗ್ರೆಸ್ ಅನ್ನು ಬಲಪಡಿಸಲು ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಸೋನಿಯಾ ಗಾಂಧಿಯವರಿಗೆ ನನ್ನ ಧನ್ಯವಾದ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಖರ್ಗೆ ಯುಗಾರಂಭ: ಪಕ್ಷದ​ ಪುನಶ್ಚೇತನವೇ ಸವಾಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.