ETV Bharat / bharat

ಉಕ್ರೇನ್​​ನಲ್ಲಿ ಹಿಂಸಾಚಾರ ನಿಲ್ಲಿಸಲು ಭದ್ರತಾ ಮಂಡಳಿಯಲ್ಲಿ ಭಾರತ ಕರೆ - ವಿಶ್ವಸಂಸ್ಥೆಯಲ್ಲಿ ಭಾರತದ ನಿಲುವು

ಮಾನವೀಯತೆ, ತಟಸ್ಥತೆ, ನಿಷ್ಪಕ್ಷಪಾತ, ಮತ್ತು ಸ್ವಾತಂತ್ರ್ಯ ಸೇರಿದಂತೆ ಯಾವುದೇ ವಿಚಾರವನ್ನು ರಾಜಕೀಯಗೊಳಿಸಬಾರದು ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಕರೆ ಕೊಟ್ಟಿದೆ. ಉಕ್ರೇನ್​​ನಲ್ಲಿ ಹಿಂಸಾಚಾರ ನಿಲ್ಲಿಸಬೇಕೆಂದು ಭಾರತದ ಉಪ ಖಾಯಂ ಪ್ರತಿನಿಧಿ ರವೀಂದ್ರ ಮನವಿ ಮಾಡಿದ್ದಾರೆ.

India at UNSC reiterates call for cessation of violence in Ukraine
ಉಕ್ರೇನ್​​ನಲ್ಲಿ ಹಿಂಸಾಚಾರ ನಿಲ್ಲಿಸಲು ಭದ್ರತಾ ಮಂಡಳಿಯಲ್ಲಿ ಭಾರತ ಕರೆ
author img

By

Published : Apr 20, 2022, 6:45 AM IST

ನ್ಯೂಯಾರ್ಕ್(ಅಮೆರಿಕ): ಉಕ್ರೇನ್​ನಲ್ಲಿ ಹಿಂಸಾಚಾರವನ್ನು ನಿಲ್ಲಿಸಿ, ಕದನ ವಿರಾಮ ಘೋಷಿಸುವಂತೆ ಭಾರತ ಪುನರುಚ್ಚರಿಸಿದೆ. ಉಕ್ರೇನ್‌ನ ಪರಿಸ್ಥಿತಿಯ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿರುವ ಭಾರತದ ಉಪ ಖಾಯಂ ಪ್ರತಿನಿಧಿ ಆರ್ ರವೀಂದ್ರ, ಉಕ್ರೇನ್​ನ ಈಗಿನ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮಾನವೀಯತೆ, ತಟಸ್ಥತೆ, ನಿಷ್ಪಕ್ಷಪಾತ, ಮತ್ತು ಸ್ವಾತಂತ್ರ್ಯ ಸೇರಿದಂತೆ ಯಾವುದೇ ವಿಚಾರವನ್ನು ರಾಜಕೀಯಗೊಳಿಸಬಾರದು ಎಂದು ಮನವಿ ಮಾಡಿದ್ದಾರೆ.

ನಾವು ಸಂಘರ್ಷದ ಆರಂಭದಿಂದಲೂ ರಾಜತಾಂತ್ರಿಕತೆ ಮತ್ತು ಸಂವಾದದ ಹಾದಿಯನ್ನು ಅನುಸರಿಸುವ ಅಗತ್ಯವನ್ನು ನಾವು ಒತ್ತಿಹೇಳಿದ್ದೇವೆ. ಮುಗ್ಧ ಮಾನವ ಜೀವಗಳು ಅಪಾಯದಲ್ಲಿರುವಾಗ, ರಾಜತಾಂತ್ರಿಕತೆಯು ಏಕೈಕ ಮಾರ್ಗವಾಗಿದೆ ಎಂದು ಆರ್ ರವೀಂದ್ರ ಅಭಿಪ್ರಾಯಪಟ್ಟರು. ಇದಲ್ಲದೆ, ಶಾಶ್ವತ ಮಾನವೀಯ ಕಾರಿಡಾರ್‌ಗಳ ಸ್ಥಾಪನೆ ಸೇರಿದಂತೆ ಅಗತ್ಯ ಮಾನವೀಯ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ತಲುಪಿಸಲು ಸುರಕ್ಷಿತ ವ್ಯವಸ್ಥೆ ಕಲ್ಪಿಸಬೇಕು. ಈ ಕುರಿತು ಅಂತಾರಾಷ್ಟ್ರೀಯ ಸಮುದಾಯ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ನಾವು ಉಕ್ರೇನ್‌ಗೆ ಹೆಚ್ಚಿನ ವೈದ್ಯಕೀಯ ಸರಬರಾಜುಗಳನ್ನು ಒದಗಿಸುತ್ತಿದ್ದೇವೆ. ಉಕ್ರೇನ್‌ನಿಂದ ಸುಮಾರು 22,500 ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡುವ ಕಾರ್ಯವನ್ನು ಭಾರತ ಮಾಡಿದೆ. ಅಷ್ಟೇ ಅಲ್ಲದೇ, ಇತರ 18 ದೇಶಗಳ ಪ್ರಜೆಗಳೊಂದಿಗೆ ನಾವು ಸಹಾಯ ಮಾಡಿದ್ದೇವೆ. ಉಕ್ರೇನ್ ಮತ್ತು ಅದರ ನೆರೆಹೊರೆಯ ರಾಷ್ಟ್ರಗಳ ಅಧಿಕಾರಿಗಳು ನಮಗೆ ಸಾಕಷ್ಟು ನೆರವು ನೀಡಿದ್ದಕ್ಕಾಗಿ ನಾವು ಅವರನ್ನು ಶ್ಲಾಘಿಸುತ್ತೇವೆ ಎಂದು ರವೀಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಪ್ರತಿಭಟನಾನಿರತರ ಮೇಲೆ ಫೈರಿಂಗ್: ಓರ್ವ ಸಾವು, ಅನೇಕರಿಗೆ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.