ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 71,365 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 1,217 ಮಂದಿಗೆ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 1,72,211 ಮಂದಿ ಕೋವಿಡ್ನಿಂದ ಚೇತರಿಕೆ ಕಂಡಿದ್ದಾರೆ. ಈವರೆಗೆ ಒಟ್ಟು 4,10,12,869 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸೋಂಕಿನಿಂದ ಗುಣಮುಖರಾಗಿರುವವರ ಪ್ರಮಾಣ ಶೇಕಡಾ 96.70ರಷ್ಟಿದೆ. ಈವರೆಗೆ ದೇಶದಲ್ಲಿ ಸುಮಾರು 5,05,279 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 8,92,828 ಇದ್ದು, ಒಟ್ಟು ಸೋಂಕಿತರಲ್ಲಿ ಶೇಕಡಾ 2.11ರಷ್ಟು ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇಲಾಖೆ ಹೇಳಿದೆ.
ಇದನ್ನೂ ಓದಿ: ಬೆಟ್ಟದ ಸಂದುವಿನಲ್ಲಿ ಸಿಲುಕಿ ಯುವಕನ ಒದ್ದಾಟ; 45 ಗಂಟೆ ಕಾರ್ಯಾಚರಣೆ ನಡೆಸಿ ಪ್ರಾಣ ರಕ್ಷಿಸಿದ ಸೇನೆ
ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್: ಈವರೆಗೆ ಸುಮಾರು 74,46,84,750 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಮಂಗಳವಾರ ಒಂದೇ ದಿನ 15,71,726 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮಾಹಿತಿ ನೀಡಿದೆ. ಈವರೆಗೆ ಸುಮಾರು 1,70,87,06,705 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ಮಂಗಳವಾರ ಒಂದೇ ದಿನದಲ್ಲಿ 53,61,099 ಮಂದಿಗೆ ಲಸಿಕೆ ನೀಡಲಾಗಿದೆ.