ETV Bharat / bharat

ದೇಶದಲ್ಲಿ ಹೊಸದಾಗಿ 30 ಸಾವಿರ ಸೋಂಕಿತರು ಪತ್ತೆ, 541 ಮಂದಿ ಮೃತ - ಭಾರತದಲ್ಲಿ ಒಮಿಕ್ರಾನ್ ಸೋಂಕಿತರ ಪ್ರಮಾಣ

ದೇಶದಲ್ಲಿ ಈವರೆಗೆ ಒಟ್ಟು 4,19,10,984 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುಣಮುಖರಾಗಿರುವವರ ಪ್ರಮಾಣ ಶೇಕಡಾ 98.03ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ದೃಢಪಡಿಸಿವೆ.

india-corona-latest-updates
India Corona: ದೇಶದಲ್ಲಿ ಹೊಸದಾಗಿ 30.7 ಸಾವಿರ ಸೋಂಕಿತರು ಪತ್ತೆ.. 541 ಮಂದಿ ಮೃತ
author img

By

Published : Feb 17, 2022, 9:27 AM IST

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಪ್ರಮಾಣದ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 30,757 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 541 ಮಂದಿಗೆ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದಿನವೊಂದಕ್ಕೆ ಸೋಂಕು ಕಾಣಿಸುವವರ ಪ್ರಮಾಣ ಶೇಕಡಾ 2.61ರಷ್ಟಿದ್ದು, ಈಗ ದೇಶದಲ್ಲಿ ಒಟ್ಟು 3,32,918 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಸೋಂಕಿತರಲ್ಲಿ ಶೇಕಡಾ 0.78ರಷ್ಟು ಮಂದಿ ಸಕ್ರಿಯ ಸೋಂಕಿತರಿದ್ದಾರೆ.

ಕಳೆದ 24 ಗಂಟೆಯಲ್ಲಿ 1,80,456 ಮಂದಿ ಕೋವಿಡ್​​ನಿಂದ ಚೇತರಿಕೆ ಕಂಡಿದ್ದಾರೆ. ಈವರೆಗೆ ಒಟ್ಟು 4,19,10,984 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ ಸೋಂಕಿನಿಂದ ಗುಣಮುಖರಾಗಿರುವವರ ಪ್ರಮಾಣ ಶೇಕಡಾ 98.03ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ದೃಢಪಡಿಸಿವೆ.

ಇದನ್ನೂ ಓದಿ: ಲಸ್ಸಾ ಜ್ವರ ನಿಜಕ್ಕೂ ಗಂಭೀರವೇ?.. ಇದರ ಲಕ್ಷಣಗಳೇನು ಗೊತ್ತೇ?

ಕೋವಿಡ್​​ನಿಂದ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 5,10,413ಕ್ಕೆ ಏರಿಕೆಯಾಗಿದ್ದು, ಒಟ್ಟು ಸೋಂಕಿತರಲ್ಲಿ ಸೋಂಕಿಗೆ ಬಲಿಯಾದವರ ಪ್ರಮಾಣ ಶೇಕಡಾ 1.19ರಷ್ಟಿದೆ.

ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್​: ಈವರೆಗೆ ಸುಮಾರು 75,55,32,460 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಗುರುವಾರ ಒಂದೇ ದಿನ 11,79,705 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್​ (ಐಸಿಎಂಆರ್​) ಮಾಹಿತಿ ನೀಡಿದೆ.

ಈವರೆಗೆ ಸುಮಾರು 1,74,24,36,288 ಕೋಟಿ ಡೋಸ್​ ವ್ಯಾಕ್ಸಿನೇಷನ್ ನೀಡಲಾಗಿದೆ. ಗುರುವಾರ ಒಂದೇ ದಿನದಲ್ಲಿ 34,75,951 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.