ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 14,313 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 181 ಮಂದಿ ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆಯ ಪ್ರಕಾರ, ಈವರೆಗೆ ದೇಶದಲ್ಲಿ 3,39,85,920 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 4,50,963 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಚೇತರಿಕೆಯ ಪ್ರಮಾಣವು ಪ್ರಸ್ತುತ ಶೇಕಡಾ 98.04 ರಷ್ಟಿದೆ. ಕಳೆದ 24 ಗಂಟೆಯಲ್ಲಿ 26,579 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ 3,33,20,057 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕಳೆದ ವರ್ಷದ ಮಾರ್ಚ್ನಿಂದ ಇದೇ ಮೊದಲ ಬಾರಿಗೆ ಚೇತರಿಕೆ ಪ್ರಮಾಣ ಹೆಚ್ಚಿದೆ. ಇನ್ನು ಕಳೆದ ಒಂದು ವಾರದ ಅವಧಿಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇಕಡಾ 1.48ರಷ್ಟಿದ್ದರೆ, ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇಕಡಾ 1.21ರಷ್ಟಿದೆ.
ಸೋಂಕು ಪರೀಕ್ಷೆ
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,81,766 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಒಟ್ಟು ದೇಶದಲ್ಲಿ 58,50,38,043 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.
ಈ ವರ್ಷದ ಆರಂಭದಲ್ಲಿ ಆರಂಭವಾದ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನದ ಮೂಲಕ 95 ಕೋಟಿ ಕೋವಿಡ್ ಲಸಿಕೆಯನ್ನು ಜನರಿಗೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಪಾಕ್ ಉಗ್ರ ದೆಹಲಿಯಲ್ಲಿ ಸೆರೆ; ಎಕೆ 47, ಗ್ರೆನೇಡ್ ವಶ