ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಪ್ರಮಾಣದ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 2,34,281 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 893 ಮಂದಿಗೆ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 3,52,784 ಮಂದಿ ಕೋವಿಡ್ನಿಂದ ಚೇತರಿಕೆ ಕಂಡಿದ್ದಾರೆ. ದಿನವೊಂದರಲ್ಲಿ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವವರ ಪೈಕಿ ಸುಮಾರು ಶೇಕಡಾ 14.50ರಷ್ಟು ಮಂದಿಯಲ್ಲಿ ಸೋಂಕು ಕಂಡುಬರುತ್ತಿದೆ.
ಈವರೆಗೆ ಒಟ್ಟು 3,87,13,494 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುಣಮುಖರಾಗಿರುವವರ ಪ್ರಮಾಣ ಶೇಕಡಾ 94.21ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಅಂಕಿ - ಅಂಶಗಳು ದೃಢಪಡಿಸಿವೆ. ಈವರೆಗೆ ದೇಶದಲ್ಲಿ ಸುಮಾರು 4,94,091 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 18,84,937 ಇದ್ದು, ಒಟ್ಟು ಸೋಂಕಿತರಲ್ಲಿ ಶೇಕಡಾ 4.59 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್: ಈವರೆಗೆ ಸುಮಾರು 72,73,90,698 ಕೋಟಿ ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಶನಿವಾರ ಒಂದೇ ದಿನ 16,15,993 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮಾಹಿತಿ ನೀಡಿದೆ. ಈವರೆಗೆ ಸುಮಾರು 1,65,70,60,692 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ಶನಿವಾರ ಒಂದೇ ದಿನದಲ್ಲಿ 62,22,682 ಮಂದಿಗೆ ಲಸಿಕೆ ನೀಡಲಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ