ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಪ್ರಮಾಣದ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 67,597 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 1,188 ಮಂದಿಗೆ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 1,80,456 ಮಂದಿ ಕೋವಿಡ್ನಿಂದ ಚೇತರಿಕೆ ಕಂಡಿದ್ದಾರೆ. ಈವರೆಗೆ ಒಟ್ಟು 4,08,40,658 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ
ಕೋವಿಡ್ ಸೋಂಕಿನಿಂದ ಗುಣಮುಖರಾಗಿರುವವರ ಪ್ರಮಾಣ ಶೇಕಡಾ 96.46ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಅಂಕಿ - ಅಂಶಗಳು ದೃಢಪಡಿಸಿವೆ. ಈವರೆಗೆ ದೇಶದಲ್ಲಿ ಸುಮಾರು 5,04,062 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 9,94,891 ಇದ್ದು, ಒಟ್ಟು ಸೋಂಕಿತರಲ್ಲಿ ಶೇಕಡಾ 2.35ರಷ್ಟು ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಇದನ್ನೂ ಓದಿ: ತಪ್ಪೊಪ್ಪಿಕೊಂಡ ಪಂಜಾಜ್ ಸಿಎಂ ಸಂಬಂಧಿ: ಜಾರಿ ನಿರ್ದೇಶನಾಲಯ ಹೇಳಿಕೆ
ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್: ಈವರೆಗೆ ಸುಮಾರು 74,29,08,121 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಸೋಮವಾರ ಒಂದೇ ದಿನ 13,46,534 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮಾಹಿತಿ ನೀಡಿದೆ. ಈವರೆಗೆ ಸುಮಾರು 1,70,21,72,615 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ಸೋಮವಾರ ಒಂದೇ ದಿನದಲ್ಲಿ 55,78,297 ಮಂದಿಗೆ ಲಸಿಕೆ ನೀಡಲಾಗಿದೆ.