ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 3,805 ಕೋವಿಡ್-19 ಸೋಂಕು ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,30,98,743ಕ್ಕೆ ಏರಿಕೆಯಾಗಿದೆ. ಶುಕ್ರವಾರ 3,545 ಹೊಸ ಕೇಸ್ಗಳು ದೃಢಪಟ್ಟಿದ್ದವು. ಕಳೆದ ಕೆಲ ದಿನಗಳ ಅಂಕಿ-ಅಂಶಗಳನ್ನು ಗಮನಿಸಿದರೆ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕಳೆದೊಂದು ದಿನದಲ್ಲಿ ದೇಶಾದ್ಯಂತ ಒಟ್ಟು 22 ಜನರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 5,24,024ಕ್ಕೆ ಏರಿಕೆಯಾಗಿದೆ. ಪ್ರಸ್ತುತ, ದೇಶಾದ್ಯಂತ ಒಟ್ಟು 20,303 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಚೇತರಿಕೆ ದರ ಶೇ. 98.74% ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 3,168 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 4,25,54,416 ಜನರು ಚೇತರಿಸಿಕೊಂಡಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ.0.78 ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರ ದರ ಶೇ. 0.79ರಷ್ಟಿದೆ.
- " class="align-text-top noRightClick twitterSection" data="">
ಕಳೆದ 24 ಗಂಟೆಗಳಲ್ಲಿ 4,87,544 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕಾ ಅಭಿಯಾನಡಿ ಈವರೆಗೆ 190 ಕೋಟಿ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಶಂಕಿತ ಉಗ್ರರಿಂದ ಗುಂಡಿನ ದಾಳಿ : ಪೊಲೀಸ್ನ ಸ್ಥಿತಿ ಗಂಭೀರ