ETV Bharat / bharat

ಏರುಗತಿಯತ್ತ ಕೊರೊನಾ​: 24 ಗಂಟೆಯಲ್ಲಿ 16,135 ಸೋಂಕಿತರು ಪತ್ತೆ, 24 ಸಾವು

ದೇಶದಲ್ಲಿ ಮಹಾಮಾರಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೊಮ್ಮೆ ಏರಿಕೆ ಕಂಡು ಬರಲು ಶುರುವಾಗಿದೆ.

India Coronavirus
India Coronavirus
author img

By

Published : Jul 4, 2022, 10:33 AM IST

ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೋವಿಡ್ ಸೋಂಕಿತ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 16,135 ಹೊಸ ಕೇಸ್​​​ಗಳು ದೃಢಪಟ್ಟಿದ್ದು, 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ದಿನಕ್ಕೆ ಹೋಲಿಸಿದರೆ 2,153 ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದೊಂದು ದಿನದಲ್ಲಿ 13,958 ಜನರು ಕೋವಿಡ್​​ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಈವರೆಗೆ ಒಟ್ಟು 4,28,79,477 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 1,13,864 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,25,223 ಕ್ಕೆ ಏರಿಕೆಯಾಗಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಜುಲೈ 3 ರವರೆಗೆ 86,39,99,907 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಭಾನುವಾರ 3,32,978 ಮಂದಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದೆ. ಪ್ರಸ್ತುತ ಚೇತರಿಕೆಯ ಪ್ರಮಾಣವು ಪ್ರಸ್ತುತ 98.54 % ರಷ್ಟಿದ್ದು, ದೈನಂದಿನ ಪಾಸಿಟಿವಿಟಿ ದರವು 4.85% ರಷ್ಟಿದೆ.

ಇದನ್ನೂ ಓದಿ: ಕೋವಿಡ್ ಹೆಚ್ಚಳ ಹಿನ್ನೆಲೆ ವರದಿ ಪರಿಶೀಲಿಸಿ ಕ್ರಮ: ಗಾಬರಿ ಪಡುವ ಅಗತ್ಯವಿಲ್ಲ ಎಂದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.